ಸರಗೂರು ತಾಲ್ಲೂಕಿನ ಕಾಳಿಹುಂಡಿ ಸೇರಿದಂತೆ ಚಿಕ್ಕದೇವಮ್ಮ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿದೆ.
ಚಿಕ್ಕದೇವಮ್ಮ ಬೆಟ್ಟ ಒಂದು ಪ್ರವಾಸಿ ತಾಣವಾಗಿದ್ದರೂ ಅದರ ಸುತ್ತಲಿನ ಗ್ರಾಮಗಳು ಮಾತ್ರ ಅಭಿವೃದ್ಧಿಯಲ್ಲಿ ಹಿಂದುಳಿದಿವೆ. ಈ ಗ್ರಾಮಗಳಿಗೆ ಬೆಳಿಗ್ಗೆ ಮತ್ತು ಸಂಜೆಯ ಸಮಯ ಬಿಟ್ಟರೆ ಇನ್ಯಾವುದೇ ಸಮಯದಲ್ಲಿಯೂ ಬಸ್‌ಗಳಿಲ್ಲ. ಕೆಲ ಗ್ರಾಮಗಳಿಗಂತೂ ಬಸ್‌ಗಳೇ ಇಲ್ಲದೆ, ಅಕ್ಕಪಕ್ಕದ ಊರುಗಳಿಗೆ ಹೋಗಿ ಬಸ್ ಹತ್ತಬೇಕಿದೆ. ಈ ಗ್ರಾಮಗಳ ನೂರಾರು ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಅನೇಕ ಮಂದಿ ಶಾಲಾ-ಕಾಲೇಜುಗಳು ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಎಚ್. ಡಿ. ಕೋಟೆ, ಸರಗೂರು ಹಾಗೂ ಮೈಸೂರಿಗೆ ಹೋಗಿಬರಬೇಕಿದೆ. ಆದರೆ ಈ ಗ್ರಾಮಗಳಲ್ಲಿ ಸರಿಯಾದ ಸಮಯಕ್ಕೆ ಬಸ್ ಸಿಗದೆ ಪ್ರಯಾಣಿಕರು ಪರಿತಪಿಸುವಂತಾಗಿದೆ.
ಪರೀಕ್ಷೆಯ ಸಮಯದಲ್ಲಂತೂ ವಿದ್ಯಾರ್ಥಿಗಳ ಪರದಾಟ ಹೇಳತೀರದು. ಈ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡಿದರೂ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲು ಗ್ರಾಮಗಳ ರಸ್ತೆ ಸರಿಯಿಲ್ಲ, ಕಲೆಕ್ಷನ್ ಕಡಿಮೆ ಇದೆ ಎಂಬ ಕಾರಣ ನೀಡುತ್ತಾರೆ.
ನೆರೆಯ ತಮಿಳುನಾಡಿನಲ್ಲಿ ಕಲೆಕ್ಷನ್ ಕಡಿಮೆ ಇರುವ ಹಾಗೂ ಸಣ್ಣ ರಸ್ತೆಗಳನ್ನು ಹೊಂದಿರುವ ಗ್ರಾಮಗಳಿಗೆ ಮಿನಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯೂ ಕಡಿಮೆ ಯಾಗುವ ಜತೆಗೆ ಸಾರ್ವಜನಿಕರಿಗೂ ಅನುಕೂಲವಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾರವೂ ಇಂತಹ ಯೋಜನೆಗಳನ್ನು ಗ್ರಾಮೀಣ ಭಾಗಗಳಿಗೆ ಪರಿಚಯಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
-ಎನ್. ಹರೀಶ, ಟಿ. ಕೆ. ಬಡಾವಣೆ, ಮೈಸೂರು.
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…