ಓದುಗರ ಪತ್ರ
ಮೈಸೂರಿನ ವಿಜಯನಗರದ ವಾಟರ್‌ಟ್ಯಾಂಕ್ ವೃತ್ತ (ಡಾಲ್ಛಿನ್ ಬೇಕರಿ) ದಿಂದ ಸೂರ್ಯ ಬೇಕರಿವರೆಗೂ ಮುಖ್ಯರಸ್ತೆಯಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ರಾತ್ರಿಯೆಲ್ಲಾ ಬೊಗಳುತ್ತಾ ಎಲ್ಲರ ನಿದ್ರೆ ಹಾಳು ಮಾಡುತ್ತಿವೆ. ಮುಂಜಾನೆ ವಾಯುವಿಹಾರಿಗಳು, ಸಾಕು ನಾಯಿಯೊಂದಿಗೆ ವಾಕ್ ಮಾಡುವವರ ಮೇಲೆ ಹಾಗೂ ದ್ವಿಚಕ್ರ ವಾಹನ ಸವಾರರ ಮೇಲೆ ದಾಳಿ ಮಾಡುತ್ತಿವೆ.
ವಿಜಯನಗರ ಮುಖ್ಯರಸ್ತೆಯಲ್ಲಿನ ಹೋಟೆಲೊಂದರ ಸಿಬ್ಬಂದಿ ಹೋಟೆಲ್‌ನ ಅಳಿದುಳಿದ ಮಾಂಸಾಹಾರವನ್ನು ಈ ನಾಯಿಗಳಿಗೆ ಹಾಕಿ ರೂಢಿ ಮಾಡಿರುವುದರಿಂದ ನಾಯಿಗಳು ಗುಂಪು ಗುಂಪಾಗಿ ಹೋಟೆಲ್‌ನ ಬಳಿಯೇ ಸುಳಿದಾಡುತ್ತಿರುತ್ತವೆ. ಈ ನಾಯಿಗಳನ್ನು ನಿಯಂತ್ರಣ ಮಾಡುವುದೇ ಹರಸಾಹಸವಾಗಿದೆ. ಮೈಸೂರು ಮಹಾ ನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
– ಆರ್. ಯಶಸ್, ಮೈಸೂರು
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…