ಬೆಂಗಳೂರಿನ ಅರಮನೆ ಮೈದಾನದಲ್ಲಿ ಇತ್ತೀಚೆಗೆ ನಡೆದ ‘ಯೂತ್ ಕಾಂಗ್ರೆಸ್’ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೇದಿಕೆಯ ಮೇಲೆ ‘ಮಂಡ್ಯ ಜನರ ಛತ್ರಿಆಟ ನನಗೆ ಗೊತ್ತಿಲ್ಲವೇ?’ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇದು ಅವರ ದುರಹಂಕಾರದ ಪರಮಾವಧಿ ಎನ್ನಬಹುದು. ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ
ಸಮಾಜದ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆಂದು ಭಾವಿಸಿ ಮಂಡ್ಯದ 7 ವಿಧಾನಸಭಾ ಸ್ಥಾನಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಡುವ ಮೂಲಕ ಬಹುತೇಕ ಒಕ್ಕಲಿಗ ಸಮುದಾಯ ಕಾಂಗ್ರೆಸ್‌ಅನ್ನು ಬೆಂಬಲಿಸಿತು. ಅಧಿಕಾರಕ್ಕೆ ಬಂದ ಬಳಿಕ ಮಂಡ್ಯ ಜನರ ಬೆಂಬಲವನ್ನು ಮರೆತ ಡಿಕೆಶಿ ಮಂಡ್ಯ ಜನರನ್ನು ‘ಛತ್ರಿ’ಗಳು ಎಂದಿರುವುದು ಸರಿಯಲ್ಲ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಲಿಲ್ಲ ಎಂಬ ಒಂದೇ ಕಾರಣಕ್ಕಾಗಿ ಡಿಕೆಶಿಯವರು ಈ ಮಾತನ್ನು ಆಡಿರಬಹುದು. ಆದರೆ ಮುಂದೆ ಅನೇಕ ಚುನಾವಣೆಗಳು ಬರಲಿವೆ. ಆಗ ಜನ ನಿಮಗೆ ಬುದ್ಧಿ ಕಲಿಸುತ್ತಾರೆ. ಆದ್ದರಿಂದ ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂಬುದನ್ನು ನೆನಪಿಟ್ಟುಕೊಂಡು ಮಂಡ್ಯ ಜನರ ಬಳಿ ಕ್ಷಮೆಯಾಚಿಸಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

10 mins ago

ʼಗ್ಯಾರಂಟಿʼ ಜನರ ಬದುಕಿನ ಆಧಾರ

ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…

29 mins ago

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

54 mins ago

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

1 hour ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

2 hours ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

3 hours ago