Mysore
29
few clouds

Social Media

ಶುಕ್ರವಾರ, 30 ಜನವರಿ 2026
Light
Dark

ಓದುಗರ ಪತ್ರ | ಇ- ಖಾತೆ ಬಗ್ಗೆ ಪಾಲಿಕೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು

dgp murder case

ಮೈಸೂರಿನ ಜನರು ತಮ್ಮ ಸ್ವಂತ ನಿವೇಶನ ಮತ್ತು ಮನೆಗಳಿಗೆ ಇ-ಖಾತೆ ಮಾಡಿಸಿಕೊಳ್ಳಲು ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ಅಷ್ಟರೊಳಗೆ ಇ-ಖಾತೆ ಮಾಡಿಸಿಕೊಳ್ಳದಿದ್ದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂಬ ವದಂತಿಯೊಂದು ಹರಿದಾಡುತ್ತಿದ್ದು, ಗಾಬರಿಗೊಂಡ ಜನರು ಇ- ಖಾತೆ ಮಾಡಿಸಿಕೊಳ್ಳಲು ಮೈಸೂರಿನ ಎಲ್ಲ ವಲಯ ಕಚೇರಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತೆ ಮಾಡಿದೆ.

ಇಂತಹ ಸುಳ್ಳು ಮಾಹಿತಿಯ ವದಂತಿಗಳನ್ನು ಕೆಲ ಮಧ್ಯವರ್ತಿಗಳು ಹಾಗೂ ಭ್ರಷ್ಟ ಅಧಿಕಾರಿಗಳು ಹಣ ಗಳಿಸುವ ಉದ್ದೇಶದಿಂದ ಪ್ರಚಾರ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಇಷ್ಟು ವರ್ಷಗಳಿಂದಲೂ ಇಲ್ಲದ ಇ-ಖಾತೆ ವಿಚಾರ ಈಗ ಏಕಾಏಕಿ ಮುನ್ನಲೆಗೆ ಬಂದಿದ್ದು ಸರ್ಕಾರದಿಂದ ಯಾವುದೇ ಆದೇಶವಿಲ್ಲದಿದ್ದರೂ ಕೊನೆಯ ದಿನಾಂಕ ನಿಗದಿಯಾಗಿದೆ ಎಂಬ ಸುಳ್ಳು ಮಾಹಿತಿ ಹೇಗೆ ಪ್ರಚಾರವಾಯಿತು? ಈ ಬಗ್ಗೆ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳನ್ನು ವಿಚಾರಿಸಿದಾಗ ‘ಸಾರ್ವಜನಿಕರು ತಮ್ಮ ಆಸ್ತಿಗೆ ಯಾವಾಗ ಬೇಕಾದರೂ ಇ-ಖಾತೆ ಮಾಡಿಸಿಕೊಳ್ಳಬಹುದು. ಅದಕ್ಕೆ ಯಾವುದೇ ಕೊನೆಯ ದಿನಾಂಕ ಎಂಬುದಿಲ್ಲ. ಆದರೆ ಆಸ್ತಿಯನ್ನು ಮಾರಾಟ ಮಾಡುವಾಗ ಕಡ್ಡಾಯವಾಗಿ ಇ-ಖಾತೆ ಪಡೆದಿರಬೇಕು’ ಎಂಬ ಮಾಹಿತಿ ನೀಡಿದ್ದಾರೆ. ಆದ್ದರಿಂದ ಈಗ ಹರಡಿರುವ ಸುಳ್ಳು ಮಾಹಿತಿಯ ಬಗ್ಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

Tags:
error: Content is protected !!