ಓದುಗರ ಪತ್ರ
ಮೈಸೂರಿನ ಜನರು ತಮ್ಮ ಸ್ವಂತ ನಿವೇಶನ ಮತ್ತು ಮನೆಗಳಿಗೆ ಇ-ಖಾತೆ ಮಾಡಿಸಿಕೊಳ್ಳಲು ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ಅಷ್ಟರೊಳಗೆ ಇ-ಖಾತೆ ಮಾಡಿಸಿಕೊಳ್ಳದಿದ್ದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂಬ ವದಂತಿಯೊಂದು ಹರಿದಾಡುತ್ತಿದ್ದು, ಗಾಬರಿಗೊಂಡ ಜನರು ಇ- ಖಾತೆ ಮಾಡಿಸಿಕೊಳ್ಳಲು ಮೈಸೂರಿನ ಎಲ್ಲ ವಲಯ ಕಚೇರಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತೆ ಮಾಡಿದೆ.
ಇಂತಹ ಸುಳ್ಳು ಮಾಹಿತಿಯ ವದಂತಿಗಳನ್ನು ಕೆಲ ಮಧ್ಯವರ್ತಿಗಳು ಹಾಗೂ ಭ್ರಷ್ಟ ಅಧಿಕಾರಿಗಳು ಹಣ ಗಳಿಸುವ ಉದ್ದೇಶದಿಂದ ಪ್ರಚಾರ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಇಷ್ಟು ವರ್ಷಗಳಿಂದಲೂ ಇಲ್ಲದ ಇ-ಖಾತೆ ವಿಚಾರ ಈಗ ಏಕಾಏಕಿ ಮುನ್ನಲೆಗೆ ಬಂದಿದ್ದು ಸರ್ಕಾರದಿಂದ ಯಾವುದೇ ಆದೇಶವಿಲ್ಲದಿದ್ದರೂ ಕೊನೆಯ ದಿನಾಂಕ ನಿಗದಿಯಾಗಿದೆ ಎಂಬ ಸುಳ್ಳು ಮಾಹಿತಿ ಹೇಗೆ ಪ್ರಚಾರವಾಯಿತು? ಈ ಬಗ್ಗೆ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳನ್ನು ವಿಚಾರಿಸಿದಾಗ ‘ಸಾರ್ವಜನಿಕರು ತಮ್ಮ ಆಸ್ತಿಗೆ ಯಾವಾಗ ಬೇಕಾದರೂ ಇ-ಖಾತೆ ಮಾಡಿಸಿಕೊಳ್ಳಬಹುದು. ಅದಕ್ಕೆ ಯಾವುದೇ ಕೊನೆಯ ದಿನಾಂಕ ಎಂಬುದಿಲ್ಲ. ಆದರೆ ಆಸ್ತಿಯನ್ನು ಮಾರಾಟ ಮಾಡುವಾಗ ಕಡ್ಡಾಯವಾಗಿ ಇ-ಖಾತೆ ಪಡೆದಿರಬೇಕು’ ಎಂಬ ಮಾಹಿತಿ ನೀಡಿದ್ದಾರೆ. ಆದ್ದರಿಂದ ಈಗ ಹರಡಿರುವ ಸುಳ್ಳು ಮಾಹಿತಿಯ ಬಗ್ಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…