ಓದುಗರ ಪತ್ರ

ಓದುಗರ ಪತ್ರ | ಆಹಾರದ ಗುಣಮಟ್ಟ ಪರಿಶೀಲಿಸಿ ಹಂಚಿಕೆ ಮಾಡಿ

ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಗ್ರಾಮದ ಗೋಕುಲ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಟಿ.ಕಾಗೇಪುರ ಗ್ರಾಮದಲ್ಲಿ ರಾಜಸ್ಥಾನಿ ಸಮಾಜದವರು ಕಲ್ಯಾಣ ಮಂಟಪವೊಂದರಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದು, ಹೋಟೆಲ್‌ವೊಂದರಿಂದ ಆಹಾರವನ್ನು ತರಿಸಿ ಸೇವನೆ ಮಾಡಿದ್ದಾರೆ. ಬಳಿಕ ಉಳಿದ ಆಹಾರವನ್ನು ಸಮೀಪದಲ್ಲೇ ಇದ್ದ ಗೋಕುಲ ವಿದ್ಯಾಸಂಸ್ಥೆಯ ಮಕ್ಕಳಿಗೆ ನೀಡಿದ್ದಾರೆ. ಈ ಆಹಾರ ಸೇವಿಸಿದ 50ಕ್ಕೂ ಹೆಚ್ಚು ರಾಜಸ್ಥಾನಿ ಸಮಾಜದವರು ಹಾಗೂ ಗೋಕುಲ ವಿದ್ಯಾಸಂಸ್ಥೆಯ 30 ಮಕ್ಕಳಿಗೆ ವಾಂತಿ ಭೇದಿ ಶುರುವಾಗಿ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಬ್ಬಹರಿದಿನಗಳಲ್ಲಿ ದಾನಿಗಳು ಸಾಮಾನ್ಯವಾಗಿ ಶಾಲೆಗಳಿಗೆ, ಬಡಮಕ್ಕಳಿಗೆ ಉಳಿದ ಆಹಾರವನ್ನು ನೀಡುತ್ತಾರೆ. ಹೀಗೆ ಆಹಾರ ನೀಡುವವರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಹಾಗೆಯೇ ಆಹಾರ ತಯಾರಿಸುವವರು ಬೇಜವಾಬ್ದಾರಿ ತೋರಿ ಗುಣಮಟ್ಟದ ಆಹಾರ ತಯಾರಿಸದಿದ್ದಲ್ಲಿ ಇಂತಹ ದುರಂತಗಳು ಸಂಭವಿಸುತ್ತವೆ.

ಸಾಮೂಹಿಕವಾಗಿ ಆಹಾರ ವಿತರಿಸುವಾಗ ಆಯೋಜಕರು ಅಥವಾ ಒದಗಿಸುವವರು ಮುನ್ನಚ್ಚರಿಕೆಯಿಂದ ಅಡುಗೆಯ ಗುಣಮಟ್ಟವನ್ನು ಹರಿಶೀಲಿಸಿ ನಂತರ ಹಂಚಿಕೆ ಮಾಡಬೇಕಿದೆ.

-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

15 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

15 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

15 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

16 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

16 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

16 hours ago