ಭಾರತೀಯ ಕ್ರಿಕೆಟ್ ತಂಡ ರಾಹುಲ್ ದ್ರಾವಿಡ್ ಕೋಚಿಂಗ್‌ನಲ್ಲಿ 2023ರಲ್ಲಿ ಏಕದಿನ ವಿಶ್ವಕಪ್ ಮತ್ತು ವರ್ಲ್ಡ್ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಫೈನಲ್ ಪ್ರವೇಶಿಸುವ ಜತೆಗೆ 2024ರ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಸದ್ಯ ರಾಹುಲ್ ದ್ರಾವಿಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್‌ರನ್ನು ನೇಮಕ ಮಾಡಲಾಗಿದೆ.
ಗೌತಮ್ ಗಂಭೀರ್ ಒಬ್ಬ ಆಟಗಾರರಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮದೇ ಆದ ಕೊಡುಗೆ ನೀಡಿದವರು. 2011ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಜತೆಗೆ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ 97 ರನ್ ಗಳಿಸುವ ಮೂಲಕ ಗೆಲುವಿನ ರೂವಾರಿಯಾದರು.
ಐಪಿಎಲ್‌ನಲ್ಲಿಯೂ ಗೌತಮ್ ಗಂಭೀರ್ ಉತ್ತಮ ಆಟಗಾರ ಮತ್ತು ಕೋಚ್ ಅನಿಸಿಕೊಂಡಿದ್ದಾರೆ. ಈ ಬಾರಿ ಅವರ ಕೋಚಿಂಗ್‌ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟ ಗಳಿಸಿತು. ಅಲ್ಲದೆ ಇವರ ನಾಯಕತ್ವದಲ್ಲಿ ಎರಡು ಬಾರಿ ಕಪ್ ಗೆದ್ದಿದೆ. ಹೀಗೆ ಅಪಾರ ಅನುಭವಗಳುಳ್ಳ ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಭಾರತೀಯ ಕ್ರಿಕೆಟ್ ತಂಡ ಮುಂದುವರಿಯುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆ ಮಾಡಲಿದೆ ಎಂಬ ವಿಶ್ವಾಸ ಮೂಡಿಸಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…