ಓದುಗರ ಪತ್ರ

ಓದುಗರ ಪತ್ರ| ಗಂಭೀರ್ ನೇಮಕ ಸೂಕ್ತವಾದದ್ದು

ಭಾರತೀಯ ಕ್ರಿಕೆಟ್ ತಂಡ ರಾಹುಲ್ ದ್ರಾವಿಡ್ ಕೋಚಿಂಗ್‌ನಲ್ಲಿ 2023ರಲ್ಲಿ ಏಕದಿನ ವಿಶ್ವಕಪ್ ಮತ್ತು ವರ್ಲ್ಡ್ ಟೆಸ್ಟ್ ಚಾಂಪಿಯನ್‌ ಶಿಪ್ ನಲ್ಲಿ ಫೈನಲ್ ಪ್ರವೇಶಿಸುವ ಜತೆಗೆ 2024ರ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಸದ್ಯ ರಾಹುಲ್ ದ್ರಾವಿಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್‌ರನ್ನು ನೇಮಕ ಮಾಡಲಾಗಿದೆ.

ಗೌತಮ್ ಗಂಭೀರ್ ಒಬ್ಬ ಆಟಗಾರರಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮದೇ ಆದ ಕೊಡುಗೆ ನೀಡಿದವರು. 2011ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಜತೆಗೆ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ 97 ರನ್ ಗಳಿಸುವ ಮೂಲಕ ಗೆಲುವಿನ ರೂವಾರಿಯಾದರು.

ಐಪಿಎಲ್‌ನಲ್ಲಿಯೂ ಗೌತಮ್ ಗಂಭೀರ್ ಉತ್ತಮ ಆಟಗಾರ ಮತ್ತು ಕೋಚ್ ಅನಿಸಿಕೊಂಡಿದ್ದಾರೆ. ಈ ಬಾರಿ ಅವರ ಕೋಚಿಂಗ್‌ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟ ಗಳಿಸಿತು. ಅಲ್ಲದೆ ಇವರ ನಾಯಕತ್ವದಲ್ಲಿ ಎರಡು ಬಾರಿ ಕಪ್ ಗೆದ್ದಿದೆ. ಹೀಗೆ ಅಪಾರ ಅನುಭವಗಳುಳ್ಳ ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಭಾರತೀಯ ಕ್ರಿಕೆಟ್ ತಂಡ ಮುಂದುವರಿಯುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆ ಮಾಡಲಿದೆ ಎಂಬ ವಿಶ್ವಾಸ ಮೂಡಿಸಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

6 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

7 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

8 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

11 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

12 hours ago