ಓದುಗರ ಪತ್ರ
ವಿಧಾನಸಭಾ ಕಲಾಪದ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಹೆಚ್ಚು ಚರ್ಚೆಯಾಗದೆ, ಹನಿಟ್ರ್ಯಾಪ್ ಪ್ರಕರಣದ ಬಗ್ಗೆಯೇ ಚರ್ಚೆಯಾಗಿದೆ.
ರಾಜ್ಯದಲ್ಲಿ ಸಾಕಷ್ಟು ಜಲ್ವಂತ ಸಮಸ್ಯೆಗಳಿವೆ. ನಮ್ಮನ್ನು ಆಳುವ ಜನಪ್ರತಿನಿಧಿಗಳು ಆ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ವಿಶ್ವಾಸದಿಂದ ಜನರು ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ವಿಧಾನ ಸಭೆಗೆ ಕಳುಹಿಸಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಮೂಲಸೌಕರ್ಯಗಳ ಕೊರತೆ, ಶಿಕ್ಷಣ, ವೈದ್ಯಕೀಯ ಸೌಲಭ್ಯಗಳ ಕೊರತೆ ಹೀಗೆ ಅನೇಕ ಸಮಸ್ಯೆಗಳ ಕುರಿತು ಅವರು ಸದನದಲ್ಲಿ ಚರ್ಚಿಸಿ ಪರಿಹಾರಗಳನ್ನು
ಹುಡುಕಬೇಕಿತ್ತು.
ಆದರೆ, ಶಾಸಕರು ತಮ್ಮ ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಹನಿಟ್ರ್ಯಾಪ್ ಪ್ರಕರಣ, ಸಮುದಾಯಗಳ ನಡುವೆ ಸಂಘರ್ಷ ಉಂಟುಮಾಡುವ ವಿಚಾರಗಳನ್ನೇ ಚರ್ಚಿಸುತ್ತಾ ಸದನದ ಸಮಯವನ್ನು ಹಾಳು ಮಾಡುವ ಜತೆಗೆ ಕಲಾಪದ ವೇಳೆ ಗದ್ದಲ ಸೃಷ್ಟಿಸುವುದು ಮಾಮೂಲಿಯಾಗಿದೆ.
ಇಂದಿಗೂ ಅನೇಕ ಸರ್ಕಾರಿ ಶಾಲೆಗಳಲ್ಲಿ ಸರಿಯಾದ ಮೂಲಸೌಕರ್ಯಗಳಿಲ್ಲ. ಕೆಲ ಗ್ರಾಮಗಳಿಗಂತೂ
ಸರಿಯಾದ ರಸ್ತೆಗಳೇ ಇಲ್ಲದೆ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ಇನ್ನು ಮೂಲಭೂತ ಸಮಸ್ಯೆಗಳು ಬಹುತೇಕ ಗ್ರಾಮಗಳ ಜನರನ್ನು ಕಾಡುತ್ತಿವೆ.
ಇಂತಹ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳಾದವರು ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಅದನ್ನು ಬಿಟ್ಟು, ಹನಿಟ್ರ್ಯಾಪ್ ಪ್ರಕರಣವನ್ನೇ ಚರ್ಚಿಸುತ್ತಾ ಕಾಲಹರಣ ಮಾಡಿದ್ದು ವಿಪರ್ಯಾಸ. ಮುಂದಾದರೂ ಶಾಸಕರು ತಮ್ಮ ಜವಾಬ್ದಾರಿಗಳನ್ನು ಅರಿತು, ಯಾವುದರ ಬಗ್ಗೆ ಚರ್ಚಿಸಬೇಕು ಎಂಬುದನ್ನು ತಿಳಿದುಕೊಳ್ಳಲಿ.
-ಮಹೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…