Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವುದು ಸರಿಯಲ್ಲ

ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ ವಿಶ್ವವಿದ್ಯಾನಿಲಯಗಳಿಗೂ ಮುಖ್ಯಮಂತ್ರಿ ಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡಬೇಕು ಎಂಬುದರ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಎಚ್. ಕೆ. ಪಾಟೀಲ್, ರಾಜ್ಯದ ಎಲ್ಲ ವಿಶ್ವ ವಿದ್ಯಾನಿಲಯಗಳಿಗೂ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ಮಾಡುವುದಕ್ಕೆ ಚಿಂತನೆ ನಡೆಸುತ್ತಿದ್ದು, ಅದಕ್ಕಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಕಾಯಿದೆಗೆ ತಿದ್ದುಪಡಿ ತರಲಾಗುವುದು. ಗುಜರಾತ್‌ನಲ್ಲಿಯೂ ಇದೇ ವ್ಯವಸ್ಥೆ ಜಾರಿಯಲ್ಲಿದೆ ಎಂದಿದ್ದಾರೆ. ಸದ್ಯ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಿಗೂ ರಾಜ್ಯ ಪಾಲರೇ ಕುಲಾಽಪತಿಗಳಾಗಿದ್ದಾರೆ. ಅದು ಅವರ ಸಾಂವಿಧಾನಿಕ ಹುದ್ದೆ ಕೂಡ. ಅಲ್ಲದೆ ಉನ್ನತ ಶಿಕ್ಷಣ ಸಚಿವರು ಸಮ ಕುಲಾಽಪತಿಗಳಾಗಿದ್ದಾರೆ. ರಾಜ್ಯಪಾಲರು ಕುಲಾಧಿಪತಿಗಳಾಗಿರುವುದರಿಂದ ಅವರಿಗೆ ವಿಶ್ವವಿದ್ಯಾನಿಲಯಗಳ ಆಡಳಿತ ವ್ಯವಸ್ಥೆಯಲ್ಲಿ ಕೆಲವೊಂದು ಅಽಕಾರ ಗಳನ್ನು ನೀಡಲಾಗಿದೆ. ಹೀಗಿರುವಾಗ ಏಕಾಏಕಿ ರಾಜ್ಯಪಾಲರ ಅಽಕಾರವನ್ನು ಮೊಟಕುಗೊಳಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ಇದು ಸರ್ಕಾರಕ್ಕೆ ರಾಜ್ಯಪಾಲರ ಬಗ್ಗೆ ಪೂರ್ವಗ್ರಹ ಭಾವನೆ ಇದೆ ಎಂಬುದನ್ನು ಪುಷ್ಟೀಕರಿಸುತ್ತದೆ.

ಇತ್ತೀಚೆಗೆ ನಡೆದ ಕೆಲವು ರಾಜಕೀಯ ಬೆಳವಣಿಗಗಳನ್ನು ನೋಡಿದರೆ ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ಕಟುವಾಗಿದೆಯೇನೋ ಎಂಬ ಅನುಮಾನ ಎಲ್ಲರಲ್ಲಿಯೂ ಮೂಡಿದೆ. ಇಂತಹ ಸಮಯದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವುದು ಆ ಅನುಮಾನಕ್ಕೆ ಮತ್ತಷ್ಟು ಇಂಬು ನೀಡಿದಂತಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿಯವರನ್ನು ಕುಲಾಧಿಪತಿಯನ್ನಾಗಿ ಮಾಡುವ ಕಾಯಿದೆ ತಿದ್ದುಪಡಿ ಬದಲು ರಾಜ್ಯಪಾಲರೇ ಕುಲಾಽಪತಿಗಳಾಗಿ ಮುಂದುವರಿಯುವಂತೆ ನೋಡಿಕೊಳ್ಳಬೇಕು. -ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು.

Tags: