ಓದುಗರ ಪತ್ರ

ಕೇಂದ್ರ ಸರ್ಕಾರದ ಸಭೆಗಳಿಗೆ ಸಿಎಂ ಹಾಜರಾಗಲಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ಮುಖ್ಯಮಂತ್ರಿಯೋ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಯೋ ಎಂಬ ಅನುಮಾನ ಈಗ ಕಾಡುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದಂತಿದೆ. ರಾಜ್ಯಕ್ಕೆ ಕೇಂದ್ರದಿಂದ ಪದೇ ಪದೇ ಅನ್ಯಾಯವಾಗುತ್ತಿದೆ ಎನ್ನುತ್ತಿರುವ ಸಿದ್ದರಾಮಯ್ಯನವರು ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ಬಜೆಟ್‌ ಪೂರ್ವಭಾವಿ ಸಭೆಗೆ ಗೈರಾಗಿ ಬಳಿಕ ಬಜೆಟ್‌ನಲ್ಲಿ ರಾಜ್ಯಕ್ಕೆ ಮೋಸವಾಗಿದೆ ಎನ್ನುತ್ತಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆಗಳಿಗೂ ಗೈರಾಗಿದ್ದರು. ಒಮ್ಮೆ ಮಾತ್ರ ಈ ಸಭೆಗೆ ಸರ್ಕಾರದ ಪರವಾಗಿ ಸಚಿವ ಕೃಷ್ಣ ಬೈರೇಗೌಡರನ್ನು ಕಳುಹಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ನೇತೃತ್ವದಲ್ಲಿ ನಡೆಯುವ ಸಭೆಗಳಿಗೆ ಹಾಜರಾಗಿ ರಾಜ್ಯದ ಅಗತ್ಯತೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಬದಲು ಸಭೆಗಳಿಗೆ ಗೈರಾಗುವ ಮೂಲಕ ಸಿಕ್ಕ ಅವಕಾಶಗಳನ್ನೆಲ್ಲ ಕೈಚೆಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸುವುದರಲ್ಲಿ ಯಾವುದೇ ಅರ್ಥವಿಲ್ಲ.

ಸಿದ್ದರಾಮಯ್ಯನವರ ಈ ನಡೆ ಅವರು ರಾಜ್ಯಕ್ಕೆ ಮುಖ್ಯ ಮಂತ್ರಿಯೋ? ಅಥವಾ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಯೋ ಎಂಬ ಪ್ರಶ್ನೆ ಮೂಡಿಸಿದೆ. ನಲವತ್ತು ವರ್ಷಗಳ ರಾಜಕೀಯ ಅನುಭವದಲ್ಲಿ ಅವರು ಮೊದಲ ಬಾರಿಗೆ ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲದವರಂತೆ ವರ್ತಿಸುತ್ತಿದ್ದಾರೇನೋ ಅನಿಸುತ್ತದೆ.

-ಶಿವಮೊಗ್ಗ ನಾ.ದಿನೇಶ್ ಅಡಿಗ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

9 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

9 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

10 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

11 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

11 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

14 hours ago