ಸಾಮಾಜಿಕ ಮೌಲ್ಯಗಳನ್ನು ಹೆಚ್ಚಿಸುವಂತಹ ಚಿತ್ರಗಳನ್ನು ನಿರ್ಮಿಸಬೇಕು ಎಂದು ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕರಿಗೆ ಕರೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿ ಮೆಚ್ಚುವಂತಿದೆ. ೨೦೧೮ ಮತ್ತು ೨೦೧೯ನೇ ಸಾಲಿನ ಕರ್ನಾಟಕ ರಾಜ್ಯಚಲನ ಚಿತ್ರ ಪ್ರಶಸ್ತಿಗಳನ್ನು ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಿ ಮಾತನಾಡಿರುವ ಮುಖ್ಯಮಂತ್ರಿಗಳು, ಕನ್ನಡ ಚಲನ ಚಿತ್ರೋದ್ಯಮದ ಏಳು ಬೀಳುಗಳನ್ನು ತಮ್ಮದೇ ಆದ ರೀತಿಯಲ್ಲಿ ವಿಶ್ಲೇಷಣೆ ಮಾಡಿದ್ದಾರೆ. ನಿರ್ಮಾಪಕರು ಸಮಾಜಕ್ಕೆ ಉತ್ತಮ ಸಂದೇಶವನ್ನು ಸಾರುವಂತಹ ಚಿತ್ರಗಳನ್ನು ನಿರ್ಮಿಸಲು ಈಗಲಾದರೂ ಮುಂದಾಗಬೇಕು.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು





