ಯಳಂದೂರು ತಾಲ್ಲೂಕಿನ ಗೌಡಹಳ್ಳಿ ಹೊಸ ಉಪ್ಪಾರ ಬಡಾವಣೆ ನಿರ್ಮಾಣಗೊಂಡು ಸುಮಾರು ೨೦ ವರ್ಷಗಳೇ ಕಳೆದಿದ್ದರೂ ಮೂಲ ಸೌಕರ್ಯಗಳಿಂದ ವಂಚಿತವಾಗಿತ್ತು. ಬೆರಳೆಣಿ ಯಷ್ಟು ವಿದ್ಯುತ್ ಕಂಬಗಳು, ರಸ್ತೆಗೆ ಕಲ್ಲು, ಮಣ್ಣು ಹಾಕಿದ್ದು ಬಿಟ್ಟರೆ ಬೇರೆ ಯಾವುದೇ ಮೂಲ ಸೌಕರ್ಯಗಳಿಲ್ಲದೆ ಜನರು ಪರ ದಾಡುವಂತಾಗಿತ್ತು.
ಇಲ್ಲಿನ ನಿವಾಸಿಗಳು ಮೂಲ ಸೌಕರ್ಯ ಗಳನ್ನು ಕಲ್ಪಿಸುವಂತೆ ಒತ್ತಾಯಿಸಿದ ಬಳಿಕ ಅರೆಬರೆ ಒಳಚರಂಡಿ ಕಾಮಗಾರಿಗಳು ನಡೆದದ್ದು ಬಿಟ್ಟರೆ ಬೇರ‍್ಯಾವುದೇ ಕಾಮಗಾರಿಯೂ ಇಲ್ಲಿ ನಡೆದಿರಲಿಲ್ಲ. ಈ ಬಡಾವಣೆಯಲ್ಲಿ ಸಮರ್ಪಕ ಒಳಚರಂಡಿ, ರಸ್ತೆಗಳಿಲ್ಲದ ಪರಿಣಾಮ ಮಳೆಗಾಲ ಬಂತು ಎಂದರೆ ಸಾಕು ಬಡಾವಣೆಯ ನಿವಾಸಿಗಳ ಪಾಡು ಹೇಳತೀರದಾಗಿತ್ತು. ಈ ಸಮಸ್ಯೆಗಳ ಕುರಿತು ಕೊಳ್ಳೇಗಾಲದ ಶಾಸಕ ಎ. ಆರ್. ಕೃಷ್ಣಮೂರ್ತಿಯವರ ಬಳಿ ಹೇಳಿಕೊಂಡು, ಮೂಲ ಸೌಕರ್ಯ ಗಳನ್ನು ಕಲ್ಪಿಸಬೇಕು ಎಂದು ಮನವಿ ಮಾಡಲಾಗಿತ್ತು, ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ನಾಲ್ಕೆ ದು ತಿಂಗಳಲ್ಲೇ ಹೊಸ ಉಪ್ಪಾರ ಬಡಾವಣೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಅನುದಾನ ನೀಡಿ ಬಡಾವಣೆಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಕಾಮಗಾರಿಗಳಿಗೆ ಚಾಲನೆ ನೀಡಿರುವುದು ಹೆಮ್ಮೆಯ ವಿಚಾರ.
ನಮ್ಮ ಮನವಿಗೆ ಸ್ಪಂದಿಸಿದ ಕೊಳ್ಳೇಗಾಲ ಶಾಸಕರಾದ ಎ. ಆರ್. ಕೃಷ್ಣಮೂರ್ತಿಯವರು ಅಭಿನಂದನಾರ್ಹರು. ಹಾಗೆಯೇ ಎಲ್ಲ ಕ್ಷೇತ್ರಗಳ ಶಾಸಕರೂ ಇವರಂತೆ ಸಾರ್ವಜನಿಕರಿಗೆ ಸ್ಪಂದಿಸುವಂತಾಗಬೇಕು. -ಗೌಡಹಳ್ಳಿ ಮಹೇಶ್, ಹೊಸ ಉಪ್ಪಾರ ಬಡಾವಣೆ, ಯಳಂದೂರು ತಾ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…