ಡಾ. ಬಿ. ಆರ್. ಅಂಬೇಡ್ಕರ್ ಅವರು ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ರಚಿಸಿ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಕಲ್ಪಿಸಿದ್ದಾರೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಿ ಅವರ ಬಾಳಿಗೆ ಬೆಳಕಾಗಿದ್ದಾರೆ.
ಆದರೆ ಇಂತಹ ಮಹನೀಯರ ಜಯಂತಿಯ ನಿಮಿತ್ತ ಮೈಸೂರು ಸಮೀಪದ ವಾಜಮಂಗಲ ಗ್ರಾಮದಲ್ಲಿ ಹಾಕಿದ್ದ ಅಂಬೇಡ್ಕರ್ ಭಾವಚಿತ್ರವುಳ್ಳ ಬ್ಯಾನರ್‌ಅನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು ಖಂಡನೀಯ. ಅಂಬೇಡ್ಕರ್‌ಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯನ್ನು ವಿಧಿಸುವ ಮೂಲಕ ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ.
- ಸಿದ್ದಲಿಂಗೇಗೌಡ ಹೈರಿಗೆ, ಎಚ್. ಡಿ. ಕೋಟೆ ತಾಲ್ಲೂಕು





