ಓದುಗರ ಪತ್ರ

ಓದುಗರ ಪತ್ರ | ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸಿ

ಡಾ. ಬಿ. ಆರ್. ಅಂಬೇಡ್ಕರ್ ಅವರು ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ರಚಿಸಿ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಕಲ್ಪಿಸಿದ್ದಾರೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಿ ಅವರ ಬಾಳಿಗೆ ಬೆಳಕಾಗಿದ್ದಾರೆ.

ಆದರೆ ಇಂತಹ ಮಹನೀಯರ ಜಯಂತಿಯ ನಿಮಿತ್ತ ಮೈಸೂರು ಸಮೀಪದ ವಾಜಮಂಗಲ ಗ್ರಾಮದಲ್ಲಿ ಹಾಕಿದ್ದ ಅಂಬೇಡ್ಕರ್ ಭಾವಚಿತ್ರವುಳ್ಳ ಬ್ಯಾನರ್‌ಅನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು ಖಂಡನೀಯ. ಅಂಬೇಡ್ಕರ್‌ಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯನ್ನು ವಿಧಿಸುವ ಮೂಲಕ ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ.

  • ಸಿದ್ದಲಿಂಗೇಗೌಡ ಹೈರಿಗೆ, ಎಚ್. ಡಿ. ಕೋಟೆ ತಾಲ್ಲೂಕು
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

47 mins ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

6 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

10 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

13 hours ago