Mysore
15
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಮೈ ವಿವಿ: ಆನ್‌ಲೈನ್‌ನಲ್ಲಿ ಪ್ರಮಾಣಪತ್ರ ಸ್ವಾಗತಾರ್ಹ

dgp murder case

ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾನಿಲಯ ಪ್ರಮಾಣ ಪತ್ರಗಳನ್ನು ಆನ್‌ಲೈನ್‌ನಲ್ಲಿ ನೀಡಲು ಮುಂದಾಗಿರುವುದು ಸ್ವಾಗತಾರ್ಹ.

ಈ ಮೊದಲು ಮೈಸೂರು ವಿವಿಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರಮಾಣ ಪತ್ರಕ್ಕಾಗಿ ಕ್ರಾಫರ್ಡ್ ಭವನಕ್ಕೆ ಅಲೆದಾಡಬೇಕಾಗಿತ್ತು. ಅಲ್ಲಿನ ಸಿಬ್ಬಂದಿಗಳೇನಾದರೂ ರಜೆ ಹಾಕಿದ್ದರೆ ಪ್ರಮಾಣ ಪತ್ರ ಸಿಗುವುದು ವಿಳಂಬವಾಗುತ್ತಿತ್ತು. ಈ ಎಲ್ಲ ಸಮಸ್ಯೆಗಳನ್ನು ಮನಗಂಡಿರುವ ವಿವಿ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಪ್ರಮಾಣ ಪತ್ರ ನೀಡಲು ಕ್ರಮ ಕೈಗೊಂಡಿದೆ. ವಿವಿಯ ಈ ಕ್ರಮದಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ. ಮೈಸೂರು ವಿವಿಯಂತೆ ಎಲ್ಲ ವಿವಿಗಳೂ ಆನ್ ಲೈನ್‌ನಲ್ಲಿ ಪ್ರಮಾಣ ಪತ್ರ ನೀಡುವುದಕ್ಕೆ ಕ್ರಮ ಕೈಗೊಂಡರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

Tags:
error: Content is protected !!