ಓದುಗರ ಪತ್ರ

ಓದುಗರ ಪತ್ರ:  ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮಾರ್ಗದರ್ಶನ ನೀಡಿ

ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಮುಂದೆ ಯಾವ ಕೋರ್ಸ್‌ಗಳನ್ನು ಅಭ್ಯಾಸ ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯಿಲ್ಲದೇ ಗೊಂದಲಕ್ಕೊಳಗಾಗುತ್ತಿದ್ದಾರೆ. ತಂದೆ ತಾಯಿ ಇಲ್ಲದಿರುವ ಮಕ್ಕಳು, ಯಾರೂ ಇಲ್ಲದೆ ಒಂಟಿಯಾಗಿ ಜೀವನ ನಡೆಸುವ ಮಕ್ಕಳು ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸೂಕ್ತ ಮಾರ್ಗದರ್ಶನದ ಕೊರತೆಯಿರುತ್ತದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದ ಬಗ್ಗೆ ನಿರ್ಧರಿಸಲು ವಿಫಲವಾಗಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೂ ಮುಂದಿನ ವ್ಯಾಸಂಗದ ಬಗ್ಗೆ ಆಸಕ್ತಿ ತೋರುವುದಿಲ್ಲ. ಆದ್ದರಿಂದ ಇಂತಹ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸೂಕ್ತ ಮಾರ್ಗದರ್ಶನ ನೀಡುವುದು ಅಗತ್ಯ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

2 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

3 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

5 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

5 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

5 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

5 hours ago