ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರಿನಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಭವನ ನಿರ್ಮಾಣಕ್ಕೆ ಜೆಎಸ್‌ಎಸ್ ಬಡಾವಣೆಯಲ್ಲಿ ಸಿಎ ನಿವೇಶನವನ್ನು ಮಂಜೂರು ಮಾಡಿದ್ದರು. ೨ ವರ್ಷಗಳ ಹಿಂದೆ ಭವನ ನಿರ್ಮಾಣಕ್ಕೆ ಬಸವ ಜಯಂತಿಯಂದು ಸುತ್ತೂರು ಶ್ರೀಗಳು ಚಾಲನೆಯನ್ನು ನೀಡಿದ್ದರು. ಅಂದಿನ ಕಾರ್ಯಕ್ರಮಕ್ಕೆ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಆಗಮಿಸಿದ್ದರು. ಆ ಸಂದರ್ಭದಲ್ಲಿ ಸರ್ಕಾರದಿಂದ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಕೋರಿದಾಗ ಸಾಧ್ಯವಾದಷ್ಟು ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು.
ಆದರೆ ಅವರು ನೀಡಿದ್ದ ಭರವಸೆ ಈಡೇರದೇ ಇರುವುದು ಬೇಸರದ ಸಂಗತಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲಾದರೂ ಭವನ ನಿರ್ಮಾಣಕ್ಕೆ ೧೦ ಕೋಟಿ ರೂ. ಅನುದಾನ ನೀಡಲು ಕ್ರಮ ಕೈಗೊಳ್ಳಬೇಕಾಗಿದೆ.
– ಪುಟ್ಟಣ್ಣ, ಅಧ್ಯಕ್ಷರು, ಬಸವ ಬಳಗ, ಸಿದ್ಧಾರ್ಥ ನಗರ, ಮೈಸೂರು





