ಓದುಗರ ಪತ್ರ
ಗೃಹ ಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಪೊಲೀಸ್ ಮಹಾನಿರ್ದೇಶಕರಾದ ಡಾ. ಸಲೀಂ ಅವರ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಕಾನೂನಿನ ಅರಿವು ಹಾಗೂ ಕಾನೂನು ಸುವ್ಯವಸ್ಥೆಯ ಪಾಲನೆ ದೃಷ್ಟಿಯಿಂದ ‘ಮನೆ ಮನೆಗೆ ಪೊಲೀಸ್’ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದು ಶ್ಲಾಘನೀಯ.
ಪೊಲೀಸ್ ಇಲಾಖೆ ಎಂದರೆ ಭಯಪಡುವ ಜನರಿಗೆ ಪೊಲೀಸರೆಂದರೆ ಸದಾಕಾಲವೂ ಜನರ ಹಿತರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಇರುವವರು ಎಂಬ ಅರಿವು ಮೂಡಿಸಿ ಅವರಲ್ಲಿ ಆತ್ಮ ಸ್ಥೈರ್ಯವನ್ನು ತುಂಬುವ ದೃಷ್ಟಿಯಿಂದ ಪೊಲೀಸ್ ಇಲಾಖೆಯು ಮನೆಮನೆಗೆ ತೆರಳಿ ಅವರಲ್ಲಿರುವ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿ ಕಾನೂನಿನ ಚೌಕಟ್ಟಿನಲ್ಲಿ ನ್ಯಾಯ ಒದಗಿಸುವ ವಿಶೇಷ ಅಭಿಯಾನಕ್ಕೆ ಮುಂದಾಗಿರುವುದು ಸ್ವಾಗತಾರ್ಹ. ಜನಸಾಮಾನ್ಯರು ಮತ್ತು ಪೊಲೀಸರ ನಡುವಿನ ಬಾಂಧವ್ಯ ಉತ್ತಮವಾಗಿದ್ದರೆ ಕಾನೂನುಬಾಹಿರ ಚಟುವಟಿಕೆಗಳಿಗೆ ಹಾಗೂ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಬಹುದು.
-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…