ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಹುಣಸೂರು ತಾಲ್ಲೂಕಿನ ಗದ್ದಿಗೆಗೆ ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿದೆ. ಗದ್ದಿಗೆ ಗ್ರಾಮದಲ್ಲಿ ಕೆಂಡಗಣ್ಣೇಶ್ವರ ದೇವಸ್ಥಾನ ಇದ್ದು, ಸಾರ್ವಜನಿಕರು ದೇವಸ್ಥಾನಕ್ಕೆ ಮದುವೆ ಕಾರ್ಯ ಹಾಗೂ ಪೂಜೆಗಳಿಗೆ ದಿನ ನಿತ್ಯ ಭೇಟಿ ನೀಡುತ್ತಾರೆ. ಆದರೆ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೇ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ.
ಸರಿಯಾದ ಸಮಯಕ್ಕೆ ಬಸ್ ಬಾರದೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾದಾಪುರ, ಗದ್ದಿಗೆ ಮಾರ್ಗವಾಗಿ ಮೈಸೂರು ಕಡೆಗೆ ಹಾಗೂ ಮೈಸೂರಿನಿಂದ ಗದ್ದಿಗೆ ಮಾರ್ಗವಾಗಿ ಮಾದಾಪುರ, ಎಚ್.ಡಿ. ಕೋಟೆ ಕಡೆಗೆ ಬೆಳಿಗ್ಗೆ ಹಾಗೂ ಸಾಯಂಕಾಲದ ವೇಳೆ ಬಸ್
ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು.




