ಓದುಗರ ಪತ್ರ

ಕಮಿಷನ್ ದಂಧೆಗೆ ಕಡಿವಾಣ ಹಾಕಿ

ರಾಷ್ಟ್ರೀಯ ತುರ್ತು ಸೇವಾ ಆಂಬ್ಯುಲೆನ್ಸ್ ಗ್ರಾಮಾಂತರ ಭಾಗಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದು, ರೋಗಿಗಳನ್ನು ತುರ್ತಾಗಿ ಆಸ್ಪತ್ರೆಗಳಿಗೆ ರವಾನಿಸಲು ಅನುಕೂಲಕರವಾಗಿದೆ.

ಈ ಆಂಬ್ಯುಲೆನ್ಸ್‌ಗಳು ರೋಗಿ ಗಳನ್ನು ಆದಷ್ಟೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಬೇಕು ಎಂಬ ನಿಯಮವಿದೆ. ಆದರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಎನ್‌ಎಎಸ್ ಆಂಬ್ಯುಲೆನ್ಸ್ ಚಾಲಕರು ಅನೇಕ ಸಂದರ್ಭಗಳಲ್ಲಿ ಇಲ್ಲಸಲ್ಲದ ಸಬೂಬು ಹೇಳಿ ತಮಗೆ ಬೇಕಾದ ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ರವಾನಿಸುವ ಚಾಳಿಯನ್ನು ರೂಢಿಸಿಕೊಂಡಿದ್ದಾರೆ. ಇತ್ತೀಚೆಗೆ ಗುಂಡ್ಲುಪೇಟೆಯ ನಿಟ್ರೆ ಗ್ರಾಮದ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸರ್ಕಾರಿ ಆಸ್ಪತ್ರೆಗೆ ಹೋಗುವ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ ಎಂದು ಹೇಳಿ ಅವರನ್ನು ಒತ್ತಾಯಪೂರ್ವಕವಾಗಿಯೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಗುಂಡ್ಲುಪೇಟೆಯ ಬಾಚಹಳ್ಳಿ ಗ್ರಾಮದ ಅಭಿಷೇಕ್ ಎಂಬ ಗಾಯಾಳುವನ್ನೂ ಸರ್ಕಾರಿ ಆಸ್ಪತ್ರೆಯ ಬದಲು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಸ್ವತಃ ಕುಟುಂಬಸ್ಥರೇ ತಿಳಿಸಿದ್ದಾರೆ. ಇತ್ತೀಚೆಗೆ ಈ ಆಂಬ್ಯುಲೆನ್ಸ್‌ಗಳ ಚಾಲಕರು ಖಾಸಗಿ ಆಸ್ಪತ್ರೆಗಳು ನೀಡುವ ಕಮಿಷನ್ ಆಸೆಗಾಗಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಿರುವ ಅನೇಕ ಉದಾಹರಣೆಗಳಿವೆ. ತುರ್ತು ಸಂದರ್ಭವನ್ನೇ ಬಳಸಿಕೊಂಡು ಅವರನ್ನು ಖಾಸಗಿ ಆಸ್ಪತ್ರೆಗಳಿಗೆ ರವಾನಿಸುವುದು ಎಷ್ಟು ಸರಿ? ಬಡರೋಗಿಗಳು ಅಽಕ ಹಣ ಪಾವತಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದು ಸಾಧ್ಯವೇ? ಮೈಸೂರು ಹಾಗೂ ಚಾಮರಾಜನಗರದ ಜಿಲ್ಲಾಧಿಗಳು ಈ ಬಗ್ಗೆ ತನಿಖೆ ನಡೆಸಿ ಕಮಿಷನ್ ಆಸೆಗಾಗಿ ರೋಗಿ ಗಳಿಗೆ ತೊಂದರೆ ನೀಡುತ್ತಿರುವ ಎನ್‌ಎಎಸ್ ಚಾಲಕರ ವಿರುದ್ಧ ಕ್ರಮ ಜರುಗಿಸಬೇಕಿದೆ. -ದಾಸನೂರು ಕೂಸಣ್ಣ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

3 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

4 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

5 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

6 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

11 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

11 hours ago