ಓದುಗರ ಪತ್ರ

ಓದುಗರ ಪತ್ರ | ಕಾವೇರಿ ಆರತಿ ಖರ್ಚು ವ್ಯರ್ಥ

ಮುಂಬರುವ ದಸರಾ ವೇಳೆಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಘೋಷಿಸಿದ್ದಾರೆ. ೧೦ ಸಾವಿರ ಮಂದಿಗೆ ಕಾವೇರಿ ಆರತಿ ವೀಕ್ಷಣೆಗೆ ಸೌಲಭ್ಯ ಕಲ್ಪಿಸಲಾಗುವುದು, ಸರ್ಕಾರ ಇದಕ್ಕಾಗಿ ೧೦೦ ಕೋಟಿ ರೂ. ಮೀಸಲಿಟ್ಟಿದೆ ಎಂದು ಅವರೇ ಹೇಳಿದ್ದಾರೆ. ಅವರು ಕುಂಭ ಮೇಳಕ್ಕೆ ಹೋಗಿದ್ದಾಗ ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿಯನ್ನು ನೋಡಿ ಈ ಯೋಜನೆಯನ್ನು ಘೋಷಿಸಿದ್ದಾರೆ. ಕಳೆದ ಮಾರ್ಚ್ ೨೨ ರಂದು ಬೆಂಗಳೂರಿನ ಸ್ಯಾಂಕಿ ಕೆರೆ ಬಳಿ ಕಾವೇರಿ ಆರತಿ (ಇದು ಕೂಡ ಪ್ರಚಾರ ಉದ್ದೇಶದ್ದೇ) ನಡೆಸಿದ್ದಾಗಲೇ ಮುಖ್ಯಮಂತ್ರಿಗಳು ಕೆಆರ್‌ಎಸ್‌ನಲ್ಲಿ ೯೨ ಕೋಟಿ ರೂ. ಗಳ ವೆಚ್ಚದಲ್ಲಿ ಕಾವೇರಿ ಆರತಿ ನಡೆಸುವುದಾಗಿ ಘೋಷಣೆ ಮಾಡಿದ್ದರು.

ಪರಿಸರವಾದಿ ಅ. ನ. ಯಲ್ಲಪ್ಪರೆಡ್ಡಿ ಅವರು ಪತ್ರಿಕೆಯೊಂದಕ್ಕೆ ಬರೆದಿದ್ದ ಪತ್ರದಲ್ಲಿ ಗಂಗೆಯಂತೆ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ಇಂದು ಕೈಗಾರಿಕೆಗಳ ತ್ಯಾಜ್ಯ ನೀರು, ಹಳ್ಳಿ ಪಟ್ಟಣಗಳ ಕೊಳಚೆ ನೀರು ಸೇರಿ ಮಲಿನ ಕೊಂಡಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಆರತಿಗೆ ಬಿಡುಗಡೆ ಮಾಡಲು ಉದ್ದೇಶಿಸಿರುವ ೯೨ ಕೋಟಿ ರೂ. ಅನುದಾನದಿಂದ ೧೦ ಸಾವಿರ ಹೆಕ್ಟೇರ್ ಜೌಗು ಪ್ರದೇಶಾಭಿವೃದ್ಧಿ ಸಾಧ್ಯವಿದೆ. ಗಂಗಾರತಿಯಿಂದ ಎಂದಾದರೂ ಗಂಗೆ ಪವಿತ್ರವಾಗಿದೆಯೇ? ಇಲ್ಲ. . . ಇನ್ನಷ್ಟು ಮಲಿನವಾಗಿದೆ. ಅಂತೆಯೇ ಕಾವೇರಿ ಆರತಿ ಮಾಡಲು ಇಂತಹದೊಂದು ಬೃಹತ್ ಮೊತ್ತವನ್ನು ಖರ್ಚು ಮಾಡುವುದು ವ್ಯರ್ಥ, ಅರ್ಥಹೀನ ವಿಚಾರ ಎಂದಿದ್ದಾರೆ. ಇದು ನಿಜಕ್ಕೂ ಸಾರ್ವಜನಿಕರು ಚಿಂತಿಸಬೇಕಾದ ವಿಚಾರ.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

7 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

20 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

20 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago