ಲೋಕಸಭಾ ಚುನಾವಣೆಯಲ್ಲಿ 234 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಎನ್‌ಡಿಎ ಮೈತ್ರಿಕೂಟದ ಪ್ರಬಲ ಪಕ್ಷವಾಗಿ ಅಧಿಕಾರಕ್ಕೆ ಬಂದಿದೆ. ಎನ್‌ಡಿಎ ಮೈತ್ರಿಕೂಟಕ್ಕೆ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ ವಿಪಕ್ಷ ಸ್ಥಾನದಲ್ಲಿದ್ದು, ಇತ್ತೀಚೆಗೆ ನಡೆದ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ 10 ಸ್ಥಾನಗಳನ್ನು ಗಳಿಸುವ ಮೂಲಕ ತನ್ನ ಶಕ್ತಿ ಪ್ರದರ್ಶಿಸಿದೆ. ಉಳಿದಂತೆ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದರೆ, ಹಿಮಾಚಲ ಪ್ರದೇಶದ ಹಮೀರ್‌ಪುರ ಕ್ಷೇತ್ರ ಮತ್ತು ಅಮರವಾರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳ ಈ ಗೆಲುವು ಇಂಡಿಯಾ ಮೈತ್ರಿಕೂಟವನ್ನು ಬಲಗೊಳಿಸಲು ಸಹಕಾರಿಯಾಗಿದೆ. ಇದೇ ರೀತಿ ಬಲಗೊಳ್ಳುತ್ತಾ ಹೋದರೆ, ಆಡಳಿತಾರೂಢ ಪಕ್ಷದ ಏಕಪಕ್ಷೀಯ ನಿರ್ಧಾರಗಳನ್ನು ಕಟುವಾಗಿ ವಿರೋಧಿಸಬಹುದು. ಆ ಮೂಲಕ ವಿಪಕ್ಷಗಳ ಬಲ ಹೆಚ್ಚಾದಷ್ಟು ಪ್ರಜಾಪ್ರಭುತ್ವ ಗಟ್ಟಿಗೊಳ್ಳುತ್ತದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು,