ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಶ್ರೀ ಮಲೆ ಮಹದೇಶ್ವರ ದೇವಾಲಯ ಹಾಗೂ ಗ್ರಾಮದ ಮುಖ್ಯದ್ವಾರದ ಬಳಿ ಇರುವ ಗಣಪತಿ ದೇವಾಲಯದ ಮುಂಭಾಗ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ದೇವಾಲಯಗಳಿಗೆ ಬರಲು ಮುಜುಗರಪಡುವಂತಾಗಿದೆ.
ಸಂಜೆ 6 ಗಂಟೆಯಾಗುತ್ತಿದ್ದಂತೆಯೇ ಮದ್ಯ ವ್ಯಸನಿಗಳು ಮಹದೇಶ್ವರ ದೇವಸ್ಥಾನದ ಬಳಿ ಅಲ್ಲಲ್ಲಿ ಗುಂಪು ಕಟ್ಟಿಕೊಂಡು ಮದ್ಯದ ಕೂಟಗಳನ್ನು ಮಾಡುತ್ತಾರೆ. ದೇವಸ್ಥಾನದ ಆವರಣದಲ್ಲಿಯೇ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗಳಿದ್ದು, ಮದ್ಯವ್ಯಸನಿಗಳು ಕುಡಿದು ಎಲ್ಲೆಂದರಲ್ಲಿ ಬಾಟಲಿ ಬೀಸಾಡುತ್ತಾರೆ ಇದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಇನ್ನು ಗ್ರಾಮದ ಪ್ರವೇಶದ್ವಾರದಲ್ಲಿಯೇ ಇರುವ ಗಣಪತಿ ದೇವಾಲಯದ ಮುಂದೆಯೂ ಇದೇ ಸಮಸ್ಯೆ ಎದುರಾಗಿದೆ. ಕೆಲ ಮದ್ಯವ್ಯಸನಿಗಳು ವಾಹನಗಳನ್ನು ನಿಲ್ಲಿಸಿಕೊಂಡು ಮದ್ಯಪಾನ ಮಾಡುತ್ತಾರೆ. ಕುಡಿದ ಮತ್ತಿನಲ್ಲಿ ಪರಸ್ಪರ ಅವಾಚ್ಯ ಪದಗಳಿಂದ ನಿಂದಿಸಿಕೊಳ್ಳುತ್ತಾ ಮಾತನಾಡುತ್ತಿರುತ್ತಾರೆ.
ಇದರಿಂದಾಗಿ ದೇವಸ್ಥಾನಕ್ಕೆ ಬರುವ ಮಹಿಳೆಯರಿಗೆ ಹಾಗೂ ಹಿರಿಯ ನಾಗರಿಕರಿಗೆ ಕಿರಿಕಿರಿಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆಗಮನಹರಿಸಿ, ದೇವಾಲಯಗಳ ಆವರಣದಲ್ಲಿ ಮದ್ಯಪಾನ ಮಾಡುವವರಿಗೆ ಕಡಿವಾಣ ಹಾಕಬೇಕಿದೆ.
-ನಂದೀಶ್ ಗೌಡ, ಅಂತರಸಂತೆ, ಎಚ್.ಡಿ.ಕೋಟೆ ತಾ.
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…
ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…