ಓದುಗರ ಪತ್ರ
ಹೆಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳಿಂದ ಮೈಸೂರು-ಮಾನಂದವಾಡಿ ರಸ್ತೆ ಮೂಲಕ ಮೈಸೂರಿಗೆ ಸಂಚರಿಸುವವರು ಹಾಗೂ ಜಯಪುರ ಹೋಬಳಿಯ ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಕೆಂಚಲಗೂಡು ಗೇಟ್ ಮಾರ್ಗವಾಗಿ ಸಪ್ತ ಋಷಿ ನಗರ, ಮಾಲೆಗಾಲದ ಮಾರಮ್ಮನವರ ದೇವಸ್ಥಾನ, ವಿವೇಕಾನಂದ ನಗರದ ಮೂಲಕವೂ ಮೈಸೂರನ್ನು ತಲುಪುತ್ತಾರೆ.
ನಿತ್ಯ ನೂರಾರು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ. ವಾಹನದಟ್ಟಣೆ ಹೆಚ್ಚಾಗಿರುವ ಈ ರಸ್ತೆಯು ಕೆಂಚಲಗೂಡು ಗೇಟ್‌ನಿಂದ ವರ್ತುಲ ರಸ್ತೆಯವರೆಗೆ ಸುಮಾರು ಐದು ಕಿಲೋಮೀಟರ್‌ನಷ್ಟು ಉದ್ದವಿದ್ದು, ಈ ಪೈಕಿ ಸುಮಾರು ಒಂದೂವರೆ ಕಿಲೋಮೀಟರ್‌ನಷ್ಟು ರಸ್ತೆ ತೀರಾ ಹದಗೆಟ್ಟು ಹೋಗಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಈ ರಸ್ತೆಯಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ನೀರು ತುಂಬಿಕೊಂಡು ಗುಂಡಿ ಕಾಣದೆ ಅನೇಕ ಸವಾರರು ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ.
ಈ ರಸ್ತೆಯನ್ನು ದುರಸ್ತಿಪಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಇಲಾಖೆಯ ಮೇಲಽಕಾರಿಗಳು ಗಮನಹರಿಸಿ ತುರ್ತಾಗಿ ಈ ರಸ್ತೆಯನ್ನು ದುರಸ್ತಿ ಮಾಡಬೇಕಿದೆ.
-ಕೆ.ಪಿ.ನಂಜುಂಡ ಸ್ವಾಮಿ, ಕೆಎಚ್‌ಬಿ ಬಡಾವಣೆ, ಕೆಂಚಲಗೂಡು.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…