2012ರಲ್ಲಿಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇನ್ನೂ ತಾರ್ಕಿಕ ಅಂತ್ಯ ಕಾಣದೆ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕದಿರುವುದು ಬೇಸರದ ಸಂಗತಿ. ಇತ್ತೀಚೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂಬ ಯೂಟ್ಯೂಬರ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಸದ್ಯ ಈ ವಿಡಿಯೋ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದ್ದು, ಸೌಜನ್ಯ ಪ್ರಕರಣ ಮತ್ತೆ ಮುನ್ನೆಲೆಗೆ ಬರುವಂತೆ ಮಾಡಿದೆ.
ಕಳೆದ 12-13 ವರ್ಷಗಳಿಂದಲೂ ಸೌಜನ್ಯ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ರಾಜ್ಯಾದ್ಯಂತ ಹೋರಾಟಗಳು, ಪ್ರತಿಭಟನೆಗಳೂ ನಡೆಯುತ್ತಿವೆಯಾದರೂ ಇನ್ನೂ ನ್ಯಾಯ ದೊರಕದಿರುವುದನ್ನು ನೋಡಿದರೆ, ಈ ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಾಣುತ್ತದೆ. ಸರ್ಕಾರ ಈ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ, ಸತ್ಯಾಂಶವನ್ನು ಹೊರತಂದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕಿದೆ.
-ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.