ಇಡೀ ರಾಜ್ಯ ದಸರಾ ಸಡಗರದಲ್ಲಿ ಮುಳುಗಿಹೋಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವುದು ಅವರ ಆತ್ಮಸ್ಥೆ ರ್ಯವನ್ನು ಕುಂದುವಂತೆ ಮಾಡಿದ್ದು, ಇದರಿಂದ ಸರ್ಕಾರದ ಜಂಘಾಬಲವೇ ಅಡಗಿಹೋಗಿದೆ ಅನಿಸುತ್ತದೆ.
ಈ ಬಾರಿ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ರಾಜ್ಯ ಸರ್ಕಾರ ೪೦ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಮೈಸೂರಿಗೆ ಗಜಪಡೆಯ ಆಗಮನವಾಗಿದ್ದು, ಭರ್ಜರಿ ತಾಲೀಮು ನಡೆಸುತ್ತಿವೆ.
ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದ ಆರೋಪಿ ಸ್ಥಾನದಲ್ಲಿದ್ದು, ತನಿಖೆಯನ್ನು ಎದುರಿಸು ವಂತಾಗಿರುವುದು ದಸರಾ ಮಹೋತ್ಸವಕ್ಕೆ ಮಂಕು ಕವಿದಂತಾಗಿದೆ.
ಮುಂದಿನ ೧೫ ದಿನಗಳ ರಾಜಕೀಯ ಬೆಳವಣಿಗೆಗಳು ಏನಾಗಬಹುದು ಎಂದು ಊಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್‌ನ ಸಚಿವರು, ಶಾಸಕರು ಸಿದ್ದರಾಮಯ್ಯನವರಿಗೆ ಬೆಂಬಲ ಸೂಚಿಸಬಹುದು. ಆದರೆ ಈ ಆರೋಪ ಸಾಬೀತಾದರೆ ಸಿದ್ದರಾಮಯ್ಯನವರ ೪೦ ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪುಚುಕ್ಕೆಯಾಗಿ ಉಳಿಯುವುದಂತೂ ಖಚಿತ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ…
ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ…
ವಿಮಾ ವಲಯದಲ್ಲಿ ಶೇ. ೧೦೦ ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ(ಎ-ಡಿಐ)ಯಿಂದ ವಿಮಾ ರಕ್ಷಣೆ ಪಡೆದ ಜೀವಗಳ ಮತ್ತು ಆಸ್ತಿಗಳ…
ರಾಜ್ಯದ ಅತ್ಯಂತ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರೆನಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪನವರ ನಿಧನ ನಿಜಕ್ಕೂ ನೋವಿನ ಸಂಗತಿ. ದೇಶದ…
ಶತ್ರುಗಳಿಗೆ ಸೆರೆ ಸಿಕ್ಕು ಚಿತ್ರ ಹಿಂಸೆ ಅನುಭವಿಸಿದರೂ ಗುಟ್ಟು ಬಿಡದ ನೂರ್ ಇನಾಯತ್ ಖಾನ್ ನವೆಂಬರ್ ತಿಂಗಳಲ್ಲಿ ಫ್ರಾನ್ಸ್ ಸರ್ಕಾರ…
ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…