ಓದುಗರ ಪತ್ರ
ಮೇ ೧೨ರಂದು ಅಂತರರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆಯನ್ನು ಫ್ಲಾರೆನ್ಸ್ ನೈಟಿಂಗಲ್ ಹೆಸರಿನಲ್ಲಿ ಆಚರಿಸುತ್ತಾರೆ. ಅವರು ಮಾಡಿದ ಸೇವೆ ವಿಶ್ವಕ್ಕೆ ಮಾದರಿಯಾಗಿದೆ. ಶುಶ್ರೂಷಕಿಯರು ಮಾಡುವ ಸೇವೆಗೆ ಬೆಲೆ ಕಟ್ಟಲಾಗದು. ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಶುಶ್ರೂಷಕಿಯರ ಸೇವೆಗೆ ಒಳಪಟ್ಟಿರುತ್ತಾರೆ. ಜಾತಿ, ಮತ ಭೇದವಿಲ್ಲದೆ, ಬಡವ ಶ್ರೀಮಂತ ಎನ್ನದೆ ಎಲ್ಲರನ್ನೂ ಸಮಾನರಾಗಿ ಕಾಣುತ್ತಾರೆ. ಇದು ಎಲ್ಲರೂ ಮೆಚ್ಚುವಂತಹ ಕೆಲಸ. ಯಾವುದೇ ಅಪರೂಪದ ಶಸ್ತ್ರ ಚಿಕಿತ್ಸೆ ನಡೆದರೂ ಶುಶ್ರೂಷಕಿಯರ ಪರಿಶ್ರಮ ಅಧಿಕವಾಗಿರುತ್ತದೆ. ಆದರೆ ಶುಶ್ರೂಷಕಿಯರ ಶ್ರಮವನ್ನು ಕಡೆಗಣಿಸಿ ವೈದ್ಯರ -ಟೋಗಳು ಪತ್ರಿಕೆಯಲ್ಲಿ ಪ್ರಕಟವಾಗುತ್ತವೆ. ಅಪರೂಪದ ಶಸ್ತ್ರಚಿಕಿತ್ಸೆಗೆ ವೈದ್ಯರೊಂದಿಗೆ ಶ್ರಮಿಸಿದ ಶುಶ್ರೂಷಕಿಯರ ಭಾವಚಿತ್ರವೂ ಪತ್ರಿಕೆಗಳಲ್ಲಿ ಪ್ರಕಟವಾದರೆ ಅವರ ಶ್ರಮ ಸಾರ್ಥಕವಾಗುತ್ತದೆ.
– ಎಂ. ಎಸ್. ಉಷಾ ಪ್ರಕಾಶ್, ಮೈಸೂರು
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…