ಓದುಗರ ಪತ್ರ

ಓದುಗರ ಪತ್ರ | ಕಮಲ್ ಹಾಸನ್ ಹೇಳಿಕೆ ಖಂಡನೀಯ

ಚೆನ್ನೈನಲ್ಲಿ ನಡೆದ ಥಗ್‌ಲೈಫ್‌- ಸಿನಿಮಾ ಈವೆಂಟ್‌ನಲ್ಲಿ ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಇದೇ ಸಮಾರಂಭದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಉಪಸ್ಥಿತರಿದ್ದರೂ ಅವರು ಆ ಸಂದರ್ಭದಲ್ಲಿ ಯಾವುದೇ ಪ್ರತಿಕ್ರಿಯೆ ನೀಡದದ್ದು ಬೇಸರ ತಂದಿದೆ. ಕನ್ನಡಪರ ಸಂಘಟನೆಗಳು ಕಮಲ್ ಹಾಸನ್ ಅವರು ತಮ್ಮ ಹೇಳಿಕೆ ಕುರಿತು ಕ್ಷಮೆ ಯಾಚಿಸಬೇಕೆಂದು ಪ್ರತಿಭಟಿಸಿ ಒತ್ತಾಯಿಸಿವೆ. ಇದಕ್ಕೆ ಸ್ಪಷ್ಟೀಕರಣ ನೀಡಿರುವ ಕಮಲ್ ಹಾಸನ್, ನಾನು ಪ್ರೀತಿಯಿಂದ ಹೇಳಿದ್ದೇನೆ. ಪ್ರೀತಿಯಿಂದ ಆಡಿದ ಮಾತಿಗೆ ಕ್ಷಮೆ ಕೇಳುವುದಿಲ್ಲ ಎಂದು ಉದ್ಧಟತನ ತೋರಿದ್ದಾರೆ. ಇಂತಹ ಹೇಳಿಕೆಗಳಿಂದ ರಾಜ್ಯ-ರಾಜ್ಯಗಳ ನಡುವೆ ಇರುವ ಸಾಮರಸ್ಯ ಹಾಳಾಗುತ್ತದೆ.

ನಟ ಕಮಲ್ ಹಾಸನ್ ಅವರು ಕೂಡಲೇ ತಮ್ಮ ಹೇಳಿಕೆ ಕುರಿತು ಕ್ಷಮೆ ಯಾಚಿಸುವ ಮೂಲಕ ವಿವಾದವನ್ನು ಅಂತ್ಯಗೊಳಿಸುವುದು ಅಗತ್ಯ.

-ಎ. ಎಸ್. ಗೋಪಾಲ ಕೃಷ್ಣ, ರಾಮಕೃಷ್ಣನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

58 mins ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

2 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

2 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

5 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

7 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

8 hours ago