ಹುಣಸೂರು ತಾಲ್ಲೂಕಿನ ಬಿಳಿಕೆರೆ ಬಸ್ ನಿಲ್ದಾಣದಿಂದ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಬಹಳ ತೊಂದರೆಯಾಗಿದೆ.
ಈಗಾಗಲೇ ಮಳೆ ಪ್ರಾರಂಭವಾಗಿದ್ದು, ಈ ರಸ್ತೆಯಲ್ಲಿ ಉಂಟಾಗಿರುವ ಗುಂಡಿಗಳಲ್ಲಿ ನೀರು ನಿಲ್ಲುತ್ತಿದ್ದು, ಮಳೆ ಬಂದು ರಸ್ತೆಯ ಮೇಲೆ ನೀರು ಹರಿಯುತ್ತಿರುವ ಸಂದರ್ಭದಲ್ಲಿ ಗುಂಡಿ ಕಾಣದೇ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ. ಸಂಬಂಧಪಟ್ಟವರು ಕೂಡಲೇ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಎಸ್. ಎನ್ . ಶಾಸ್ತ್ರಿ, ಹುಣಸೂರು





