ಓದುಗರ ಪತ್ರ
ಎಲ್ಲೆಡೆ ಧಾರಾಕಾರ ಮಳೆ ಆಗುತ್ತಿದೆ. ಪರಿಣಾಮವಾಗಿ ಸಾರ್ವಜನಿಕರು ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಸಾವು-ನೋವು-ನಷ್ಟ ಎಲ್ಲೆಡೆ ಉಂಟಾಗಿದೆ. ಇದರ ಜೊತೆಗೆ ಮಳೆ ಬಂದಾಗ ವಿದ್ಯುತ್ ಅನಾಹುತಗಳೂ ಸಂಭವಿಸುವುದು ಸಹಜ. ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸ ಬೇಕಿದೆ.
ವಿದ್ಯುತ್ ಕಂಬಗಳಿಗೆ ವೈಯರ್ ಕಟ್ಟಿ ಬಟ್ಟೆ ಒಣಗಿಸುವುದು ಅಪಾಯಕಾರಿ. ಮಳೆ-ಗಾಳಿ ಪರಿಣಾಮವಾಗಿ ವಿದ್ಯುತ್ ತಂತಿಗಳು ಮರದ ಮೇಲೆ, ರಸ್ತೆಗಳಲ್ಲಿ, ಮನೆಯ ಮೇಲೆ ಬೀಳಬಹುದು.
ಅದರಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದು, ಆಕಸ್ಮಿಕವಾಗಿ ಯಾರಾದರೂ ಅದನ್ನು ತುಳಿದರೆ ಅಥವಾ ಹಿಡಿದರೆ ಪ್ರಾಣಾಪಾಯವೇ ಉಂಟಾಗಬಹುದು.
ಜಮೀನು – ತೋಟಗಳಲ್ಲಿ ಪಂಪ್‌ಸೆಟ್ ಬಳಸುವಾಗ ಮಳೆ ಬಂದರೆ ರೈತರು ಎಚ್ಚರಿಕೆ ವಹಿಸುವುದು ಅಗತ್ಯ. ಆದ್ದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಇದರ ಬಗ್ಗೆ ತಿಳಿವಳಿಕೆ ನೀಡಬೇಕು. ಮಳೆ ಬಂದಾಗ ಮನೆಯ ವಿದ್ಯುತ್ ಉಪಕರಣಗಳನ್ನು ಜಾಗ್ರತೆಯಿಂದ ಉಪಯೋಗಿಸಬೇಕು.
ಮುಖ್ಯವಾಗಿ ಸೆಸ್ಕ್ ಸಿಬ್ಬಂದಿ, ಅಧಿಕಾರಿಗಳು ಮಳೆ ಗಾಳಿ ಇದ್ದಾಗ ವಿದ್ಯುತ್ ಕಂಬಗಳನ್ನು ಸರಿಯಾಗಿ ಪರಿಶೀಲಿಸಬೇಕು. ಅದರಿಂದ ವಿದ್ಯುತ್ ಅವಘಡಗಳನ್ನು ನಿಯಂತ್ರಿಸಬಹುದು.
-ಎಂ. ಎಸ್. ಉಷಾ ಪ್ರಕಾಶ್, ಎಸ್‌ಬಿಎಂ ಕಾಲೋನಿ, ಮೈಸೂರು
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…