ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿ ಗಳ ಬದುಕಿನ ಪ್ರಮುಖ ಘಟ್ಟಗಳಾಗಿವೆ. ಈ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿ ಗಳನ್ನು ಶಾಲೆಯವರು ಹಾಗೂ ಪೋಷಕರು ಕೊಂಡಾಡುತ್ತಾರೆ. ಉತ್ತೀರ್ಣರಾದವರು ತಮ್ಮ ಮುಂದಿನ ಗುರಿಯ ಬಗ್ಗೆ ಚಿಂತಿಸುತ್ತಾರೆ. ಆದರೆ ಅನುತ್ತೀರ್ಣ ಗೊಂಡ ಕೆಲ ವಿದ್ಯಾರ್ಥಿಗಳು ಪೋಷಕ ರಿಗೆ ಹೆದರಿ ಜೀವಕ್ಕೆ ಅಪಾಯ ತಂದುಕೊಳ್ಳುವ ಸಾಧ್ಯತೆಗಳಿರುತ್ತವೆ. ಉತ್ತೀರ್ಣರಾಗಲಿ, ಅನುತ್ತೀರ್ಣರಾಗಲಿ ಮಕ್ಕಳನ್ನು ಪ್ರೋತ್ಸಾಹಿಸಿ ಮುಂದಿನ ದಾರಿ ತೋರಿಸಬೇಕಾದ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರ ಮೇಲಿರುತ್ತದೆ. ಮಕ್ಕಳು ಗೆದ್ದಾಗ ಹಿಗ್ಗದಂತೆ, ಸೋತಾಗ ಕುಗ್ಗದಂತೆ ಅವರನ್ನು ಪ್ರೋತ್ಸಾಹಿಸಿ ಮೇಲೆತ್ತಬೇಕು. ಪರೀಕ್ಷಾ ಸಮಯದಲ್ಲಿ ಮಕ್ಕಳು ಸಮಯ ವ್ಯರ್ಥ ಮಾಡದಂತೆ, ಓದುವತ್ತ ಅವರ ಗಮನ ಕೇಂದ್ರೀಕೃತವಾಗುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ಅವರು ಅನುತ್ತೀರ್ಣರಾದರೂ ಅವರ ಮನಸ್ಸಿಗೆ ಘಾಸಿಯಾಗದಂತೆ ಭರವಸೆಯ ಮಾತುಗಳನ್ನಾಡಿ, ಹುರಿದುಂಬಿಸಬೇಕು. ಮಕ್ಕಳು ಕೂಡ ಎದೆಗುಂದದೆ, ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸ ಬೇಕು. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…