ಓದುಗರ ಪತ್ರ

ಓದುಗರ ಪತ್ರ | ಫಲಿತಾಂಶವನ್ನು ಸವಾಲಾಗಿ ಸ್ವೀಕರಿಸಿ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿ ಗಳ ಬದುಕಿನ ಪ್ರಮುಖ ಘಟ್ಟಗಳಾಗಿವೆ. ಈ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿ ಗಳನ್ನು ಶಾಲೆಯವರು ಹಾಗೂ ಪೋಷಕರು ಕೊಂಡಾಡುತ್ತಾರೆ. ಉತ್ತೀರ್ಣರಾದವರು ತಮ್ಮ ಮುಂದಿನ ಗುರಿಯ ಬಗ್ಗೆ ಚಿಂತಿಸುತ್ತಾರೆ. ಆದರೆ ಅನುತ್ತೀರ್ಣ ಗೊಂಡ ಕೆಲ ವಿದ್ಯಾರ್ಥಿಗಳು ಪೋಷಕ ರಿಗೆ ಹೆದರಿ ಜೀವಕ್ಕೆ ಅಪಾಯ ತಂದುಕೊಳ್ಳುವ ಸಾಧ್ಯತೆಗಳಿರುತ್ತವೆ. ಉತ್ತೀರ್ಣರಾಗಲಿ, ಅನುತ್ತೀರ್ಣರಾಗಲಿ ಮಕ್ಕಳನ್ನು ಪ್ರೋತ್ಸಾಹಿಸಿ ಮುಂದಿನ ದಾರಿ ತೋರಿಸಬೇಕಾದ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರ ಮೇಲಿರುತ್ತದೆ. ಮಕ್ಕಳು ಗೆದ್ದಾಗ ಹಿಗ್ಗದಂತೆ, ಸೋತಾಗ ಕುಗ್ಗದಂತೆ ಅವರನ್ನು ಪ್ರೋತ್ಸಾಹಿಸಿ ಮೇಲೆತ್ತಬೇಕು. ಪರೀಕ್ಷಾ ಸಮಯದಲ್ಲಿ ಮಕ್ಕಳು ಸಮಯ ವ್ಯರ್ಥ ಮಾಡದಂತೆ, ಓದುವತ್ತ ಅವರ ಗಮನ ಕೇಂದ್ರೀಕೃತವಾಗುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ಅವರು ಅನುತ್ತೀರ್ಣರಾದರೂ ಅವರ ಮನಸ್ಸಿಗೆ ಘಾಸಿಯಾಗದಂತೆ ಭರವಸೆಯ ಮಾತುಗಳನ್ನಾಡಿ, ಹುರಿದುಂಬಿಸಬೇಕು. ಮಕ್ಕಳು ಕೂಡ ಎದೆಗುಂದದೆ, ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸ ಬೇಕು. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

9 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

10 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

13 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

14 hours ago