ಓದುಗರ ಪತ್ರ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಸಂಖ್ಯೆಗೆ ಕೆಲವು ಖಾಸಗಿ ಪಿಯುಸಿ ಕಾಲೇಜಿನವರು ಕರೆ ಮಾಡಿ ನಮ್ಮ ಕಾಲೇಜಿಗೆ ನಿಮ್ಮ ಮಕ್ಕಳನ್ನು ಸೇರಿಸಿ ಎಂದು ಒತ್ತಾಯಿಸುತ್ತಿದ್ದಾರೆ. ನಿಮಗೆ ಫೋನ್ ನಂಬರ್ ಕೊಟ್ಟಿದ್ದು ಯಾರು ಎಂದು ಕೇಳಿದರೆ ಆಯಾ ಶಾಲೆಗಳಿಂದ ಪಡೆದಿದ್ದೇವೆ ಎನ್ನುತ್ತಾರೆ. ಈ ಬಗ್ಗೆ ಶಾಲೆಗಳಲ್ಲಿ ವಿಚಾರಿಸಿದರೆ ನಾವು ಯಾವ ಕಾಲೇಜಿಗೂ ಪೋಷಕರ ಫೋನ್ ನಂಬರ್ ಕೊಡುವುದಿಲ್ಲ ಎನ್ನುತ್ತಾರೆ. ಖಾಸಗಿ ಕಾಲೇಜುಗಳ ದೂರವಾಣಿ ಕರೆಯಿಂದ ಪೋಷಕರಿಗೆ ಕಿರಿಕಿರಿಯಾಗುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯವರು ಕೂಡಲೇ ಕ್ರಮ ಕೈಗೊಂಡು ಖಾಸಗಿ ಕಾಲೇಜುಗಳಿಗೆ ಪೋಷಕರ ದೂರವಾಣಿ ಸಂಖ್ಯೆಗಳನ್ನು ಕೊಡುವವರ ವಿರುದ್ಧ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.
– ನಿಂಗರಾಜ್, ಮೈಸೂರು
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…