Mysore
21
scattered clouds

Social Media

ಭಾನುವಾರ, 16 ಮಾರ್ಚ್ 2025
Light
Dark

ಓದುಗರ ಪತ್ರ | ಮೈಕ್ರೋ ಫೈನಾನ್ಸ್ ಕಂಪೆನಿಗಳ ಹಾವಳಿ ತಪ್ಪಿಸಿ

ವರುಣ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಹಲವು ಹಳ್ಳಿಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಹಾವಳಿ ಹೆಚ್ಚಾಗಿದ್ದು, ಅವರ ಕಿರುಕುಳ ತಾಳಲಾರದೆ ಜನರು ಗ್ರಾಮಗಳನ್ನೇ ತೊರೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ, ರಾಂಪುರ, ಕುರಿಹುಂಡಿ, ಶಿರಮಳ್ಳಿ, ಕಗ್ಗಲೂರು, ಹೆಗ್ಗಡಹಳ್ಳಿ, ಮುದ್ದಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಹೆದರಿರುವ ಗ್ರಾಮಸ್ಥರು ಗ್ರಾಮಗಳನ್ನೇ ತೊರೆದಿದ್ದಾರೆ. ಹಬ್ಬದ ದಿನಗಳಲ್ಲಿಯೂ ಈ ಗ್ರಾಮಗಳ ಜನರು ಊರಿಗೆ ಬರಲಾಗದ ಸ್ಥಿತಿಯಲ್ಲಿದ್ದಾರೆ.

ಮೀಟರ್ ಬಡ್ಡಿಯ ದಂಧೆಗಿಂತಲೂ ಕಠೋರವಾಗಿ ಈ ಮೈಕ್ರೋ ಫೈನಾನ್ಸ್ ಕಂಪೆನಿಗಳು ವರ್ತಿಸುತ್ತಿದ್ದು, ಜೀವನಾಧಾರಕ್ಕೆಂದು ಸಾಲ ಮಾಡಿದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಾಲ ತೀರಿಸಲು ಪರದಾಡುವಂತಾಗಿದೆ. ಮೈಕ್ರೋ ಫೈನಾನ್ಸ್ ಕಂಪೆನಿಗಳು ನೀಡುವ ಸಾಲಕ್ಕೆ ಶೇ. ೪೦ರಷ್ಟು ಬಡ್ಡಿ ಹಾಕುತ್ತವೆ. ಇದರಿಂದ ಸಾಲ ಪಡೆದವರು ತೀರಿಸಲು ಪರದಾಡುವಂತಾಗಿದೆ. ಹಾಗಾಗಿ ಮೈಕ್ರೋ ಫೈನಾನ್ಸ್ ಕಂಪೆನಿಗಳನ್ನು ನಿಷೇಧಿಸಬೇಕು ಎಂದು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಽವೇಶನದಲ್ಲಿ ಕೆಲವು ಶಾಸಕರು ಒತ್ತಾಯಿಸಿದ್ದಾರೆ. ಸಾಲದ ಆಮಿಷಗಳನ್ನು ಒಡ್ಡಿ ಬಲವಂತವಾಗಿ ಸಾಲ ಕೊಡುವ ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಸರ್ಕಾರ ಆದಷ್ಟು ಬೇಗ ಕಡಿವಾಣ ಹಾಕಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

 

Tags: