ಓದುಗರ ಪತ್ರ

ಓದುಗರ ಪತ್ರ | ಮೈಕ್ರೋ ಫೈನಾನ್ಸ್ ಕಂಪೆನಿಗಳ ಹಾವಳಿ ತಪ್ಪಿಸಿ

ವರುಣ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಹಲವು ಹಳ್ಳಿಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಹಾವಳಿ ಹೆಚ್ಚಾಗಿದ್ದು, ಅವರ ಕಿರುಕುಳ ತಾಳಲಾರದೆ ಜನರು ಗ್ರಾಮಗಳನ್ನೇ ತೊರೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ, ರಾಂಪುರ, ಕುರಿಹುಂಡಿ, ಶಿರಮಳ್ಳಿ, ಕಗ್ಗಲೂರು, ಹೆಗ್ಗಡಹಳ್ಳಿ, ಮುದ್ದಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಹೆದರಿರುವ ಗ್ರಾಮಸ್ಥರು ಗ್ರಾಮಗಳನ್ನೇ ತೊರೆದಿದ್ದಾರೆ. ಹಬ್ಬದ ದಿನಗಳಲ್ಲಿಯೂ ಈ ಗ್ರಾಮಗಳ ಜನರು ಊರಿಗೆ ಬರಲಾಗದ ಸ್ಥಿತಿಯಲ್ಲಿದ್ದಾರೆ.

ಮೀಟರ್ ಬಡ್ಡಿಯ ದಂಧೆಗಿಂತಲೂ ಕಠೋರವಾಗಿ ಈ ಮೈಕ್ರೋ ಫೈನಾನ್ಸ್ ಕಂಪೆನಿಗಳು ವರ್ತಿಸುತ್ತಿದ್ದು, ಜೀವನಾಧಾರಕ್ಕೆಂದು ಸಾಲ ಮಾಡಿದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಾಲ ತೀರಿಸಲು ಪರದಾಡುವಂತಾಗಿದೆ. ಮೈಕ್ರೋ ಫೈನಾನ್ಸ್ ಕಂಪೆನಿಗಳು ನೀಡುವ ಸಾಲಕ್ಕೆ ಶೇ. ೪೦ರಷ್ಟು ಬಡ್ಡಿ ಹಾಕುತ್ತವೆ. ಇದರಿಂದ ಸಾಲ ಪಡೆದವರು ತೀರಿಸಲು ಪರದಾಡುವಂತಾಗಿದೆ. ಹಾಗಾಗಿ ಮೈಕ್ರೋ ಫೈನಾನ್ಸ್ ಕಂಪೆನಿಗಳನ್ನು ನಿಷೇಧಿಸಬೇಕು ಎಂದು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಽವೇಶನದಲ್ಲಿ ಕೆಲವು ಶಾಸಕರು ಒತ್ತಾಯಿಸಿದ್ದಾರೆ. ಸಾಲದ ಆಮಿಷಗಳನ್ನು ಒಡ್ಡಿ ಬಲವಂತವಾಗಿ ಸಾಲ ಕೊಡುವ ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಸರ್ಕಾರ ಆದಷ್ಟು ಬೇಗ ಕಡಿವಾಣ ಹಾಕಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಆದೇಶ: ಡಾ. ಶರಣ‌ ಪ್ರಕಾಶ್ ಪಾಟೀಲ್

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ…

53 mins ago

ಹನೂರು: ಕಾಡುಹಂದಿ ದಾಳಿ: ಮುಸುಕಿನ ಜೋಳ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಎಂಟಿ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆದಿದ್ದ ಮುಸುಕಿನ ಜೋಳವನ್ನು…

2 hours ago

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ…

3 hours ago

ನಾಳೆ ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…

4 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಸಾಯಿಸಿ ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ  ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…

4 hours ago

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

5 hours ago