ಮೈಸೂರಿನ ಇಲವಾಲ ಸಮೀಪದ ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್ ಬಳಿ ಇರುವ ವಿನಾಯಕ ಗಾರ್ಡನ್ ಸಿಟಿ, ಬ್ರಹ್ಮಾನಂದ ಸಾಗರ ಲೇಔಟ್‌ನ ಬಳಿಯ ರಸ್ತೆ ವಿಭಜಕ(ಡಿವೈಡರ್)ದಲ್ಲಿ ಯು ಟರ್ನ್ ತೆಗೆದುಕೊಳ್ಳಲು ಅವಕಾಶ ನೀಡಿದ್ದು, ಇದು ಅಪಘಾತಕ್ಕೆ ಆಹ್ವಾನ ನೀಡಿದಂತಿದೆ.
ಇಲವಾಲದಿಂದ ಮೈಸೂರಿನ ಕಡೆಗೆ ಸಂಚರಿಸುವ ವಾಹನಗಳು ಅತಿಯಾದ ವೇಗದಲ್ಲಿ ಸಾಗುತ್ತವೆ. ಇದರಿಂದಾಗಿ ವಿನಾಯಕ ಗಾರ್ಡನ್ ಸಿಟಿ ಹಾಗೂ ಅರ್ಬನ್ ವ್ಯಾಲಿ ಲೇಔಟ್‌ನ ನಿವಾಸಿಗಳು ಇಲವಾಲದ ಕಡೆಗೆ ಹೋಗಲು ಈ ರಸ್ತೆ ವಿಭಜಕವನ್ನು ದಾಟುವ ವೇಳೆ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ಈ ಭಾಗದಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದು, ಸಾಕಷ್ಟು ದೂರುಗಳು ಕೂಡ ದಾಖಲಾಗಿವೆ. ಆದ್ದರಿಂದ ಸಂಬಂಧಪಟ್ಟವರು ವಿನಾಯಕ ಗಾರ್ಡನ್ ಬಳಿ ಇರುವ ರಸ್ತೆ ವಿಭಜಕದ ಯು ಟರ್ನ್‌ಅನ್ನು ಮುಚ್ಚಿದರೆ ಅಪಘಾತಗಳನ್ನು ತಪ್ಪಿಸಬಹುದು. ಅಲ್ಲದೆ ಸೇಂಟ್ ಜೋಸೆಫ್ ಸೆಂಟ್ರಲ್ ಶಾಲೆಯ ಬಳಿಯಿಂದ ಇಲವಾಲದವರೆಗೂ ಸರ್ವೀಸ್ ರಸ್ತೆ ನಿರ್ಮಾಣ ಮಾಡಿದರೆ ಅಪಘಾತಗಳನ್ನು ಕಡಿಮೆ ಮಾಡಬಹುದು. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಕ್ರಮವಹಿಸಬೇಕಿದೆ.
-ಸ್ಥಳೀಯ ನಿವಾಸಿಗಳು, ಅರ್ಬನ್ ವ್ಯಾಲಿ ಲೇಔಟ್ ಹಾಗೂ ವಿನಾಯಕ ಗಾರ್ಡನ್ ಸಿಟಿ, ಇಲವಾಲ, ಮೈಸೂರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…