ಓದುಗರ ಪತ್ರ

ಓದುಗರ ಪತ್ರ | ಆಯುಷ್ಮಾನ್ ಕಾರ್ಡ್; ಎಲ್ಲ ಆಸ್ಪತ್ರೆಗಳೂ ಪರಿಗಣಿಸಲಿ

ಇತ್ತೀಚೆಗೆ ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್‌ ಭವ ಯೋಜನೆಯನ್ನು ಜಾರಿಗೆ ತಂದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ.

ಆದರೆ, ಇತ್ತೀಚೆಗೆ ನನ್ನ ಆರೋಗ್ಯದಲ್ಲಿ ಏರುಪೇರಾದಾಗ ನನ್ನ ಮಗ ನನ್ನನ್ನು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ದಾಖಲಿಸಿದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿಗೆ ನನ್ನ ಆಯುಷ್ಮಾನ್ ಕಾರ್ಡ್ ತೋರಿಸಿದಾಗ, ಆಸ್ಪತ್ರೆಯ ಸಿಬ್ಬಂದಿ ನಾವು ಈ ಕಾರ್ಡನ್ನು ಪರಿಗಣಿಸುವುದಿಲ್ಲ ಎಂದು ತಿರಸ್ಕರಿಸಿ ಹಣ ಕಟ್ಟಿಸಿಕೊಂಡಿದ್ದಾರೆ.

೮೬ ವರ್ಷ ವಯಸ್ಸಿನ ನನಗೆ ಈ ಕಾರ್ಡಿನ ಅನುಕೂಲ ಸಿಗದಿದ್ದ ಮೇಲೆ ಯಾವ ಪುರುಷಾರ್ಥಕ್ಕಾಗಿ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ? ಆರೋಗ್ಯ ಸಂಬಂಧ ಯೋಜನೆಗಳನ್ನು ಜಾರಿಗೆ ತಂದ ಮೇಲೆ ಫಲಾನುಭವಿಗಳಿಗೆ ಆ ಯೋಜನೆಯ ಲಾಭ ತಲುಪುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ಯಾವುದಾದರೂ ಆಸ್ಪತ್ರೆ ಆ ಯೋಜನೆಯನ್ನು ತಿರಸ್ಕರ ಮಾಡಿದ್ದಲ್ಲಿ ಅಂತಹ ಆಸ್ಪತ್ರೆಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಲ್ಲವೇ?

ಬಡ ಮತ್ತು ಮಧ್ಯಮ ವರ್ಗದ ಜನರು ಇಂತಹ ಯೋಜನೆಗಳನ್ನು ನಂಬಿಕೊಂಡಿರುತ್ತಾರೆ. ಅಂತಹವರಿಗೆ ಪೂರ್ಣವಾಗಿ ಈ ಯೋಜನೆಯ ಲಾಭ ಸಿಗುವಂತೆ ಮಾಡಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಎಲ್ಲ ಆಸ್ಪತ್ರೆಗಳಲ್ಲಿಯೂ ಆಯುಷ್ಮಾನ್ ಕಾರ್ಡ್‌ನ ಯೋಜನೆಯ ಲಾಭ ಸಿಗುವಂತೆ ಮಾಡಬೇಕು.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

4 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

7 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

7 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

7 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

7 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

7 hours ago