ಗುಂಡ್ಲುಪೇಟೆ ತಾಲ್ಲೂಕಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದೊಳಗೆ ನಿತ್ಯ ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
ಈ ಬಸ್ ನಿಲ್ದಾಣಕ್ಕೆ ರಾಜ್ಯ ಹಾಗೂ ಅಂತರರಾಜ್ಯ ಬಸ್‌ಗಳು ಬಂದು ಹೋಗು ತ್ತವೆ. ನೂರಾರು ಪ್ರಯಾಣಿಕರು ಇದೇ ಬಸ್ ನಿಲ್ದಾಣಕ್ಕೆ ಬಂದು ಬಸ್ ಹತ್ತುಬೇಕು. ಅಂದಾಜಿನ ಪ್ರಕಾರ ನಿತ್ಯ ಈ ನಿಲ್ದಾಣದಲ್ಲಿ ೨೦೦ಕ್ಕೂ ಅಧಿಕ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಗುಂಡ್ಲುಪೇಟೆ ತಾಲ್ಲೂಕಿನ ಅನೇಕ ಗ್ರಾಮಗಳ ಜನರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ಈ ಬಸ್ ನಿಲ್ದಾಣಕ್ಕೆ ಬಂದು ಹೋಗುತ್ತಾರೆ. ಆದರೆ ಈ ಬಸ್ ನಿಲ್ದಾಣದೊಳಗೆ ದ್ವಿಚಕ್ರ ವಾಹನ ಸವಾರರು ಯಾವುದೇ ಅಡೆತಡೆ ಇಲ್ಲದೆ ಬೈಕ್‌ಗಳನ್ನು ಓಡಿಸುತ್ತಿದ್ದು, ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿದೆ. ಪ್ರಯಾಣಿಕರನ್ನು ಬಿಡಲು ಅಥವಾ ಅವರ ಬ್ಯಾಗ್‌ಗಳನ್ನು ಬಸ್ ಬಳಿ ತಂದು ಇರಿಸಲು ಬೈಕ್ ಗಳಲ್ಲಿ ಬರುವುದೇನೋ ಸರಿ. ಆದರೆ ಕೆಲ ಪುಂಡರು ಹೆಲ್ಮೆಟ್‌ಅನ್ನೂ ಧರಿಸದೆ ಸುಖಾ ಸುಮ್ಮನೆ ನಿಲ್ದಾಣದೊಳಗೇ ಬೈಕ್‌ಗಳನ್ನು ವೇಗವಾಗಿ ಚಲಾಯಿಸುತ್ತಿದ್ದು, ಅಪಘಾತಗಳು ಸಂಭವಿಸುವ ಅಪಾಯವಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಽಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಬಸ್ ನಿಲ್ದಾಣದೊಳಗೆ ದ್ವಿಚಕ್ರ ವಾಹನಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕಿದೆ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…
ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ…
ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…
ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…