ಓದುಗರ ಪತ್ರ

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿರುವುದು ಸ್ವಾಗತಾರ್ಹವಾಗಿದೆ.

ಹಲವು ರಾಜಕಾರಣಿಗಳು ವಿವಿಯ ಗೌರವ ಡಾಕ್ಟರೇಟ್‌ಗಳಿಗೆ ಲಾಬಿ ಮಾಡುತ್ತಿರುವ ಕಾಲದಲ್ಲಿ,ಬೊಮ್ಮಾಯಿ ಅವರು ತಮಗೆ ಹಾವೇರಿ ವಿಶ್ವವಿದ್ಯಾಲಯ ನೀಡುತ್ತಿರುವ ಗೌರವ ಪದವಿಯನ್ನು ನಯವಾಗಿ ತಿರಸ್ಕರಿಸಿರುವುದು ರಾಜಕಾರಣಿಗಳಿಗೊಂದು ಮಾದರಿಯ ನಡೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರದ ಅಧಿನದಲ್ಲಿರುವ ಬಹುತೇಕ ವಿಶ್ವವಿದ್ಯಾನಿಲಯಗಳು ರಾಜಕಾರಣಿಗಳಿಗೆ, ಮಂತ್ರಿ ಮಹೋದಯರಿಗೆ, ಜನಪ್ರಿಯ ಚಲನಚಿತ್ರ ತಾರೆಯರಿಗೆ, ಉದ್ಯಮಿಗಳಿಗೆ ಗೌರವ ಡಾಕ್ಟರೇಟ್ ಪದವಿಗಳನ್ನು ನೀಡುತ್ತಿವೆ. ಇವರಲ್ಲಿ ಅರ್ಹರಿಗಿಂತ ಅನರ್ಹರ ಪಾಲೇ ಹೆಚ್ಚಾಗಿರುತ್ತದೆ. ವಿವಿಧ ಕ್ಷೇತ್ರದ ನಿಜವಾದ ಗಣ್ಯ ಸಾಧಕರನ್ನು ಗುರುತಿಸದೇ ಇರುವುದು ಬೇಸರದ ಸಂಗತಿಯಾಗಿದೆ.

ಬಸವರಾಜ ಬೊಮ್ಮಾಯಿ ಅವರ ನಿಲುವನ್ನು ಉಳಿದ ರಾಜಕಾರಣಿಗಳು ಮತ್ತು ಉದ್ಯಮಿಗಳು ತಾಳುವುದು ಅಗತ್ಯ. ಇನ್ನು ಮುಂದಾದರೂ ವಿವಿಗಳು ಗೌರವ ಡಾಕ್ಟರೇಟ್ ಮತ್ತು ‘ನಾಡೋಜ’ ಪದವಿಯನ್ನು ರಾಜಕಾರಣಿಗಳು, ಚಿತ್ರನಟರನ್ನು ಹೊರತುಪಡಿಸಿ ವಿವಿಧ ಕ್ಷೇತ್ರಗಳಲ್ಲಿ ಎಲೆ ಮರೆಯ ಕಾಯಿಯಂತಿರುವ ಸಾಧಕರನ್ನು ಗುರುತಿಸಿ ನೀಡುವುದು ಔತ್ಯ.

-ಟಿ. ಸತೀಶ್ ಜವರೇಗೌಡ, ಮಂಡ್ಯ

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

43 mins ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

1 hour ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

1 hour ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

1 hour ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

1 hour ago