ಗಣೇಶ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಗ್ರಾಮದ ಪ್ರತಿ ಬೀದಿಯಲ್ಲಿಯೂ ಯುವಕರು ಒಗ್ಗೂಡಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮದಿಂದ ಪೂಜಿಸುತ್ತಾರೆ.
ಕೆಲವೆಡೆ ಮೂರು ದಿನಗಳ ಕಾಲ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜಿಸಿದರೆ, ಇನ್ನೂ ಕೆಲ ಭಾಗಗಳಲ್ಲಿ ತಿಂಗಳುಗಟ್ಟಲೇ ಪೂಜಿಸುವವರೂ ಇದ್ದಾರೆ. ನಿಗದಿತ ಸಮಯ ಮುಗಿದ ಬಳಿಕ ಗಣಪತಿ ಮೂರ್ತಿಯನ್ನು ಕೆರೆ, ಬಾವಿ, ನದಿಯಲ್ಲಿ ವಿಸರ್ಜಿಸುವುದು ವಾಡಿಕೆ. ಈ ವೇಳೆ ನಿರ್ಲಕ್ಷ್ಯ ದಿಂದಾಗಿ ವಿಸರ್ಜಿಸಲು ಹೋದವರು ನೀರುಪಾಲಾದ ಸಾಕಷ್ಟು ಘಟನೆಗಳೂ ನಡೆದಿವೆ.
ಸ್ಥಳೀಯ ಆಡಳಿತ ಎಷ್ಟೇ ಜಾಗ್ರತೆವಹಿಸಿ ನಿಗದಿಪಡಿಸಿದ ಸ್ಥಳದಲ್ಲೇ ಗಣಪತಿ ವಿಸರ್ಜಿಸುವಂತೆ ಸೂಚಿಸಿದರೂ ಯಾವುದನ್ನೂ ಲೆಕ್ಕಿಸದೆ ಅಪಾಯಕಾರಿ ಸ್ಥಳಗಳಲ್ಲಿ ಗಣಪತಿ ಮೂರ್ತಿ ವಿಸರ್ಜಿಸಲು ಹೋಗಿ ಅಪಾಯಕ್ಕೆ ಈಡಾಗುತ್ತಿದ್ದಾರೆ. ಅಲ್ಲದೆ ರಾಸಾಯನಿಕ ಬಣ್ಣಗಳಿಂದ ಕೂಡಿದ ಗಣಪತಿ ಮೂರ್ತಿಗಳ ಬಳಕೆ ಹೆಚ್ಚಾಗುತ್ತಿದ್ದು, ಇವುಗಳನ್ನು ನೀರಿನ ಮೂಲಗಳಲ್ಲಿ ಬಿಡುವುದರಿಂದ ಜಲ ಮಾಲಿನ್ಯವೂ ಉಂಟಾಗುತ್ತಿದೆ. ಆದ್ದರಿಂದ ಸ್ಥಳೀಯ ಆಡಳಿತ ಪರಿಸರ ಸ್ನೇಹಿ ಗಣಪನ ಮೂರ್ತಿಯನ್ನು ಕೂರಿಸುವಂತೆ ಜಾಗೃತಿ ಮೂಡಿಸುವ ಜತೆಗೆ ಗಣಪತಿ ವಿಸರ್ಜನೆ ವೇಳೆ ಕೆರೆ, ನದಿ, ಬಾವಿಗಳ ಸಮೀಪ ದೋಣಿಗಳ ವ್ಯವಸ್ಥೆ ಮಾಡಿಕೊಳ್ಳುವಂತೆಯೂ ಸೂಚನೆ ನೀಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…