ಓದುಗರ ಪತ್ರ

ಓದುಗರ ಪತ್ರ | ಬಸ್ ನಿರ್ವಾಹಕರು ಸಭ್ಯತೆಯಿಂದ ವರ್ತಿಸಲಿ

ಗುಂಡ್ಲುಪೇಟೆ-ಮೈಸೂರು ಮಾರ್ಗವಾಗಿ ಸಂಚರಿಸುವ ಕೆಎಸ್ ಆರ್ ಟಿಸಿ ಬಸ್‌ನಲ್ಲಿ ಕಂಡಕ್ಟರ್ ಒಬ್ಬರು ಪ್ರಯಾಣಿಕರು ಚಿಲ್ಲರೆ ನೀಡಿಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಏಕವಚನದಲ್ಲಿ ನಿಂದಿಸಿದ್ದಲ್ಲದೇ ನಿಮ್ಮಂತಹವರು ಏಕಾಗಿ ಬರುತ್ತೀರಿ, ಬಸ್ಸಿಂದ ಕೆಳ ಗಿಳಿರಿ’ ಎಂದು ಹೇಳಿರುವುದಾಗಿ ವರದಿ ಯಾಗಿದೆ.

ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ಕಾಡದಿರಲಿ ಹಾಗೂ ಸುಲಭವಾಗಿ ಹಣ ಪಾವತಿಸಿ ಟಿಕೆಟ್ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಸರ್ಕಾರ ಎಲ್ಲ ಸರ್ಕಾರಿ ಬಸ್‌ಗಳಲ್ಲಿಯೂ ಆನ್‌ಲೈನ್ ಪೇಮೆಂಟ್‌ಗಾಗಿ ಕ್ಯೂಆರ್ ಕೋಡ್ ಬಳಸುವಂತೆ ನಿರ್ವಾಹಕರಿಗೆ ಸೂಚಿಸಿದೆ. ಆದರೆ ಇದು ನಗರ ಭಾಗಗಳಲ್ಲಿ ಸಂಚರಿಸುವ ಬಸ್‌ಗಳಿಗೆ ಮಾತ್ರ ಸೀಮಿತವಾಗಿದ್ದು, ಗ್ರಾಮೀಣ ಭಾಗದ ಬಸ್‌ಗಳಲ್ಲಿ ಕ್ಯೂಆರ್ ಕೋಡ್ ಬಳಸುತ್ತಿಲ್ಲ. ಇದ ರಿಂದಾಗಿ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ಕಾಡುತ್ತಿದ್ದು, ಚಿಲ್ಲರೆ ಕೊಡದ ಪ್ರಯಾಣಿಕರನ್ನು ನಿರ್ವಾಹಕರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ.

ಇತ್ತೀಚೆಗೆ ಕಂಡಕ್ಟರ್‌ಗಳ ವರ್ತನೆ ಮಿತಿ ಮೀರಿದ್ದು, ಸರ್ಕಾರ ಕೂಡಲೇ ಇವರ ವಿರುದ್ಧ ಕ್ರಮಕೈಗೊಳ್ಳಬೇಕು. –ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

8 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

8 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

8 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

9 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

9 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

10 hours ago