ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ ಮಧ್ಯೆ ಭಾಗದಲ್ಲಿ ಎಲ್ಲೂ ಬಸ್ ತಂಗುದಾಣ ನಿರ್ಮಿಸಿಲ್ಲ. ಈ ಮುಖ್ಯ ರಸ್ತೆಯ ‘ಅಮ್ಮ ಕಾಂಪ್ಲೆಕ್ಸ್’ (ಮಾ ಲ್ಯಾಬ್), ಮುಂಭಾಗದ ರಸ್ತೆಯಲ್ಲೇ ಬಿಸಿಲು ಮಳೆ ಗಾಳಿ ಚಳಿ ಎನದೇ, ಮರದ ಕೆಳಗೆ ನಗರ ಸಾರಿಗೆ ಬಸ್ಸಿಗಾಗಿ ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳು ಕಾಯುತ್ತಿರುತ್ತಾರೆ. ಇದು ಜನನಿಬಿಡ ಪ್ರದೇಶವಾಗಿರುವುದರಿಂದ ನೂರಾರು ಪ್ರಯಾಣಿಕರು ಇಲ್ಲಿಂದಲೇ ವಿವಿಧೆಡೆಗಳಿಗೆ ಪ್ರಯಾಣಿಸುತ್ತಾರೆ. ಈ ಮುಖ್ಯ ರಸ್ತೆಯ ಅಮ್ ಕಾಂಪ್ಲೆಕ್ಸ್ ಬಳಿ ಸಾಕಷ್ಟು ಜಾಗವೂ ಇರುವುದರಿಂದ ಇಲ್ಲಿ ಬಸ್ ನಿಲ್ದಾಣವನ್ನು ನಿರ್ಮಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು. ಈ ಬಗ್ಗೆ ನಗರ ಪಾಲಿಕೆಯ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…
ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…
ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…