ಓದುಗರ ಪತ್ರ
ರಾಜ್ಯದಲ್ಲಿ ವಿಧವಾ ಪಿಂಚಣಿ ಫಲಾನುಭವಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಪಿಂಚಣಿ ಮೊತ್ತವನ್ನು ಮಾತ್ರ ಏರಿಕೆ ಮಾಡಿಲ್ಲ. ವಿಧವಾ ವೇತನವಾಗಿ ಸರ್ಕಾರ ಮಾಸಿಕ ೮೦೦ ರೂ. ಮಾತ್ರ ನೀಡುತ್ತಿದೆ. ಇದು ಅಲ್ಪ ಮೊತ್ತವಾಗಿದೆ. ಇದರಲ್ಲಿ ಕುಟುಂಬ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಮೂರು ಹೊತ್ತು ಹೊಟ್ಟೆತುಂಬ ಊಟ, ಮೈತುಂಬಾ ಬಟ್ಟೆಗೆ ಅಗತ್ಯವಾದಷ್ಟು ಹಣವಾದರೂ ದೊರೆತರೆ ಈ ಪಿಂಚಣಿ ಫಲಾನುಭವಿಗಳ ಬದುಕಿಗೆ ಭದ್ರನೆಲೆ ದೊರೆತಂತೆ ಆಗುತ್ತದೆ. ಇವರಿಗೆ ಇತರೆ ಖರ್ಚುಗಳೂ ಇರುತ್ತವೆ ಎಂಬುದನ್ನು ಮರೆಯುವಂತಿಲ್ಲ.
ಅಲ್ಲದೆ, ಅಡುಗೆ ಸಾಮಾನುಗಳು, ದವಸ ಧಾನ್ಯಗಳು ಹಾಗೂ ತರಕಾರಿಗಳ ಬೆಲೆಗಳಲ್ಲಿ ಹೆಚ್ಚಳ ಆಗುತ್ತಲೇ ಇದೆ. ಹಾಗೆಯೇ ಮಕ್ಕಳ ವಿದ್ಯಾಭ್ಯಾಸದ ಖರ್ಚು ಕೂಡ ಇರುತ್ತದೆ. ಹೀಗಿರುವಾಗ ಸರ್ಕಾರ ಕೊಡುವ ಪಿಂಚಣಿ ಹಣದಿಂದ ಜೀವನ ಸಾಗಿಸುವುದು ಸಾಧ್ಯವೆ? ಆದ್ದರಿಂದ ಸರ್ಕಾರ ಕೂಡಲೆ ವಿಧವಾ ವೇತನವನ್ನು ಮಾಸಿಕ ೧,೫೦೦ ರೂ. ಗೆ ಹೆಚ್ಚಿಸಿದರೆ ಬಡ ಫಲಾನುಭವಿಗಳ ಬದುಕಿಗೆ ಅನುಕೂಲವಾಗುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಽಗಳು ಗಂಭೀರವಾಗಿ ಚಿಂತಿಸಿ, ಸೂಕ್ತ ಕ್ರಮಕೈಗೊಳ್ಳಬೇಕು.
-ಸಿದ್ದಲಿಂಗೆಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…