ಮಂಡ್ಯ ಜಿಲ್ಲೆಯ ಕೃಷ್ಣ ರಾಜ ಸಾಗರದ ಸಂತೆಮಾಳ ವೃತ್ತದಲ್ಲಿ ಫುಟ್ ಪಾತ್ ಮೇಲೆಯೇ ಸ್ಥಳೀಯ ವ್ಯಾಪಾರಿಗಳು ಮಾರಾಟ ಮಾಡುತ್ತಾರೆ. ಫಾಸ್ಟ್ ಫುಡ್ ಅಂಗಡಿ ನಡೆಸುವವರು ಅವರ ವಾಹನಗಳನ್ನು ಫುಟ್‌ಪಾತ್ ಮೇಲೆ ನಿಲ್ಲಿಸಿಕೊಳ್ಳುವುದರಿಂದ ಪಾದಚಾರಿಗಳು ರಸ್ತೆಯಲ್ಲಿ ಓಡಾಡುವಂತಾಗಿದೆ.
ಸಂಬಂಧ ಪಟ್ಟವರು ಈ ಬಗ್ಗೆ ಗಮನ ಹರಿಸಿ ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ವಹಿವಾಟು ನಿಷೇಧಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ. – ಬಿ. ಅಪೇಕ್ಷ, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು





