ರಾಜ್ಯದ ಹಲವು ಇಲಾಖೆಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ ಎಂದು ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಾಮಾನ್ಯ ಜನರು ಕೇವಲ ಒಂದು ತಿಂಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಸಾಕು ಕೆಇಬಿ ಇಲಾಖೆಯ ಅಧಿಕಾರಿಗಳು ಅದೇ ದೊಡ್ಡ ಅಪರಾಧವೆಂಬಂತೆ ವರ್ತಿಸುತ್ತಾರೆ. ಅಲ್ಲದೆ ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುತ್ತಾರೆ. ಆದರೆ ಸರ್ಕಾರಿ ಕಚೇರಿಗಳಲ್ಲಿ ಲಕ್ಷಾಂತರ ರೂ. ವಿದ್ಯುತ್ ಬಿಲ್ ಬಾಕಿ ಇದ್ದರೂ ಅದನ್ನು ವಸೂಲಿ ಮಾಡಲು ಮಾತ್ರ ಮುಂದಾಗಿಲ್ಲ. ಇತ್ತ ಸಚಿವರು ಈ ಬಾಕಿಯನ್ನು ವಸೂಲಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ. ಆದರೆ ಬಿಲ್ ಪಾವತಿಯಾಗುವವರೆಗೂ ಅಲ್ಲಿನ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಯಾವುದೇ ಅಧಿಕಾರಿಗಳು ಮುಂದಾಗುವುದಿಲ್ಲ. ಆದ್ದರಿಂದ ಸರ್ಕಾರ ಈ ವಿದ್ಯುತ್ ಬಿಲ್ ಹೊರೆಯನ್ನು ಜನರ ತಲೆ ಮೇಲೆ ಹೊರಿಸುವ ಮುನ್ನ ಅಧಿಕಾರಿಗಳು ವಿದ್ಯುತ್ ಬಿಲ್ ವಸೂಲಿ ಮಾಡಿಲಿ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಜನರಿಂದ ಆಯ್ಕೆಯಾದ ಶಾಸಕರು ತಮ್ಮ ಕ್ಷೇತ್ರದ ಜನರಿಗೆ ಯಾವ ದಿನ, ಯಾವ ಸಮಯದಲ್ಲಿ ಲಭ್ಯವಿರುತ್ತಾರೆ ಎಂಬ ಮಾಹಿತಿ ತಿಳಿದಿರಬೇಕು. ತಮ್ಮ…
ಇಂದಿನ ಜೀವನಶೈಲಿಯಲ್ಲಿ ಬಾಟಲಿ ನೀರಿನ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರಯಾಣದ ಸಮಯದಲ್ಲಿ, ಶಾಲಾ-ಕಾಲೇಜುಗಳಲ್ಲಿ, ಕಚೇರಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ…
ಜಿ.ಎಲ್.ತ್ರಿಪುರಾಂತಕ ಪೂರ್ವಭಾವಿ ಸಭೆಯಂತೆ ದಸರಾ ಪರಾಮರ್ಶನ ಸಭೆಯೂ ಇರಲಿ ಅರಮನೆಗಳ ನಗರಿ, ಸಾಂಸ್ಕೃತಿಕ ರಾಜಧಾನಿ ಮೈಸೂರು ಅನೇಕ ವಿಷಯಗಳಿಗೆ ಜಗದ್ವಿಖ್ಯಾತಿಯನ್ನು…
ಎಸ್.ಎಲ್.ಚೆನ್ನಬಸವಣ್ಣ , ಐಪಿಎಸ್, ಉಪ ನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ನೀರಿಲ್ಲದೆ ಮೀನು ಬದುಕಲಾರದು; ಹಾಗೆಯೇ ಜಲಚರಗಳಿಲ್ಲದ ನೀರು…
ನ.೨೬ರಂದು ಮೈಸೂರಿನಲ್ಲಿ ಆಯೋಜಿಸಿರುವ ಸಂವಿಧಾನ ದಿನಾಚರಣೆ ಬಗ್ಗೆ ಪರ-ವಿರೋಧ ಚರ್ಚೆ ‘ಆಂದೋಲನ’ ಪತ್ರಿಕೆಯೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ದಲಿತ ಮುಖಂಡರು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಹೊಸ…