ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಾಣದ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷ ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಪ್ರತಿಮೆ ನಿರ್ಮಾಣದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಶೀಘ್ರ ಮುಗಿಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ.
ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಪ್ರತಿಮೆ ನಿರ್ಮಾಣದ ಕಾಮಗಾರಿಯು ಇಷ್ಟು ತಡವಾಗಲು ಕಾರಣವಾದರೂ ಏನು? ಈ ಬಗ್ಗೆ ಗುತ್ತಿಗೆದಾರರು ಸಾರ್ವಜನಿಕರಿಗೆ ಮಾಹಿತಿ ನೀಡಬೇಕಿದೆ.
ಇಲ್ಲವಾದರೆ ಕಾಮಗಾರಿಯನ್ನು ಚುರುಕುಗೊಳಿಸಿ ಮುಂದಿನ ಜನವರಿಯಲ್ಲಿ ನಡೆಯುವ ವಿವೇಕಾನಂದರ ಜಯಂತ್ಯುತ್ಸವದ ವೇಳೆಗಾದರೂ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರತಿಮೆಯನ್ನು ಅನಾವರಣ ಮಾಡಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.





