ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.
ಆರ್ಥಿಕ ಶಿಸ್ತು, ಯೋಜಿತ ವ್ಯವಸ್ಥೆ, ಮಿತವ್ಯಯ ಗಳ ಸ್ಪಷ್ಟ ಪರಿಕಲ್ಪನೆ ಇಲ್ಲದೆ ಇರುವುದು ಹಾಗೂ ಆಮದು ರಫ್ತುಗಳ ಬಗ್ಗೆ ದೂರದೃಷ್ಟಿ ಯಿಲ್ಲದಿರುವುದು ಕಳೆದ ಒಂದು ವರ್ಷದಿಂದ ಬೆಲೆ ಏರಿಕೆಗೆ ಕಾರಣವಾಗಿದೆ. ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯ ನಡುವೆ ಸಾಮಾನ್ಯ ಜನರು ಬದುಕುವುದೇ ಕಷ್ಟವಾಗಿದೆ.
ಚುನಾಯಿತ ಪ್ರತಿನಿಧಿಗಳು ಸಂಸತ್ ಕಲಾಪಗಳಲ್ಲಿ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿ ಜನರಿಗೆ ಅನುಕೂಲವಾಗುವ ನಿರ್ಣಯಗಳನ್ನು ಕೈಗೊಳ್ಳುವ ಬದಲು ಪರಸ್ಪರ ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಾ ಕಾಲ ಹರಣ ಮಾಡುತ್ತಿದ್ದಾರೆ. ಸರ್ಕಾರದ ಆಡಳಿತ ಜನರಿಗೆ ಬೇಸರ ಮೂಡಿಸಿದ್ದು, ಸರ್ಕಾರಗಳು ತಮ್ಮ ಉಚಿತ ಯೋಜನೆಗಳಿಗೆ ಹಣ ಹೊಂದಿಸುವ ಸಲುವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಆದ್ದರಿಂದ ಸರ್ಕಾರ ಬೆಲೆ ಏರಿಕೆ ನೀತಿಯನ್ನು ಕೈಬಿಟ್ಟು, ಅಗತ್ಯ ವಸ್ತುಗಳ ಬೆಲೆ ಇಳಿಸಬೇಕಿದೆ. -ಬ್ಯಾ. ರಾ. ಪ್ರಸನ್ನ ಕುಮಾರ್, ಬ್ಯಾಡರಹಳ್ಳಿ, ಕೆ. ಆರ್. ನಗರ ತಾ.





