ದೇಶದ ವಿವಿಧ ನ್ಯಾಯಾಲಯಗಳಲ್ಲಿ ಸಿವಿಲ್ ನ್ಯಾಯಾಧೀಶರಾಗಿ ನೇಮಕ ಹೊಂದಲು ಅಭ್ಯರ್ಥಿಗಳು ವಕೀಲರಾಗಿ ಕಡೆಯ ಪಕ್ಷ ಮೂರು ವರ್ಷಗಳ ಕಾಲ ಕೆಲಸ ಮಾಡಬೇಕೆಂಬ ನಿಯಮವನ್ನು ಪುನಃ ಜಾರಿಗೆ ತರಲು ಆದೇಶಿಸಿರುವ ಸರ್ವೋಚ್ಚ ನ್ಯಾಯಾಲಯದ ಇತ್ತೀಚಿನ ತೀರ್ಪು ಸ್ವಾಗತಾರ್ಹವಾಗಿದ್ದು, ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಸದೃಢಗೊಳಿಸುವ ಪ್ರಯತ್ನವಾಗಿದೆ.
ಮೂರು ವರ್ಷಗಳ ಕಾಲ ವಕೀಲರಾಗಿ ಕೆಲಸ ಮಾಡಿರಬೇಕೆಂಬ ನಿಯಮ 2002 ರವರೆಗೂ ಜಾರಿಯಲ್ಲಿತ್ತಾದರೂ ನಂತರ ಆ ನಿಯಮವನ್ನು ತೆಗೆದು ಹಾಕಲಾಯಿತು. ನ್ಯಾಯಾಧೀಶರ ಹುದ್ದೆ ಉನ್ನತ ಹಾಗೂ ಪವಿತ್ರವಾದ ಹುದ್ದೆಯಾಗಿದ್ದು, ಇಂತಹ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳು ನ್ಯಾಯಾಲಯದ ರೀತಿ ರಿವಾಜುಗಳ ಜೊತೆಗೆ ನ್ಯಾಯಾಲಯದ ನಿಯಮಗಳು, ಕಾನೂನಿನ ತಿಳಿವಳಿಕೆ ಹಾಗೂ ವಿಶೇಷವಾಗಿ ಕಾನೂನುಗಳನ್ನು ಅನ್ವಯಗೊಳಿಸುವ ಬಗ್ಗೆ ಹೆಚ್ಚಿನ ಪರಿಜ್ಞಾನ ಹೊಂದಿರಬೇಕು. ಪುಸ್ತಕಗಳಲ್ಲಿ ಅಥವಾ ಗ್ರಂಥಗಳಲ್ಲಿ ಏನೇ ಓದಿಕೊಂಡಿದ್ದರೂ , ವಕೀಲರಾಗಿ ನ್ಯಾಯಾಲಯಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳದ ಹೊರತು, ಅವರಿಗೆ ನ್ಯಾಯಾಂಗದ ಒಳ ಹೊರಗುಗಳ ಬಗ್ಗೆ ಹೆಚ್ಚಿನ ತಿಳಿವಳಿಕೆ ಲಭ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಸರ್ವೋಚ್ಚ ನ್ಯಾಯಾಲಯದ ಶೀರ್ವ ಗಮನಾರ್ಹವಾಗಿದೆ.
-ಕೆ.ವಿ ವಾಸು, ವಿವೇಕಾನಂದ ನಗರ, ಮೈಸೂರು
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…