ಮೈಸೂರಿನಲ್ಲಿ ಕೆಲ ವರ್ಷಗಳಿಂದ ಕಡಿಮೆಯಾಗಿದ್ದ ಪೆಟ್ರೋಲ್ ಕಳ್ಳರ ಹಾವಳಿ ಮತ್ತೆ ಹೆಚ್ಚಾಗಿದ್ದು, ಮನೆಯ ಮುಂಭಾಗಗಳಲ್ಲಿ ನಿಲ್ಲಿಸುವ ಬೈಕ್ ಗಳಲ್ಲಿ ನಿತ್ಯ ಪೆಟ್ರೋಲ್ ಕಳ್ಳತನವಾಗುತ್ತಿದೆ. ನಗರದ ವಿಜಯನಗರ ರೈಲ್ವೆ ಬಡಾವಣೆಯ 10ನೇ ಕ್ರಾಸ್‌ನ ಮನೆಗಳ ಮುಂದೆ ನಿಲ್ಲಿಸುವ ಬೈಕ್‌ಗಳ ಪೆಟ್ರೋಲ್ ಪೈಪನ್ನೇ ಕತ್ತರಿಸಿ ಕಳ್ಳರು ಪೆಟ್ರೋಲ್ ಕದಿಯುತ್ತಿದ್ದಾರೆ. ಇತ್ತೀಚೆಗೆ ಈ ಬಡಾವಣೆಗಳಲ್ಲಿ ಪೊಲೀಸ್ ಗಸ್ತು ತಿರುಗುವುದು ಕಡಿಮೆಯಾಗಿದ್ದು, ಕಳ್ಳರ ಹಾವಳಿ ಹೆಚ್ಚಾಗಲು ಕಾರಣವಾಗಿದೆ. ಕಳ್ಳರು ಯಾವುದೇ ಅಂಜಿಕೆ ಇಲ್ಲದೆ ಪೆಟ್ರೋಲ್ ಕದ್ದು ಪರಾರಿಯಾಗುತ್ತಿದ್ದಾರೆ.
ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಮುಂದಿನ ದಿನಗಳಲ್ಲಿ ಮನೆಗಳ್ಳತನ ಅಥವಾ ಸರಗಳತಗಳಾಗಬಹುದು ಎಂಬ ಆತಂಕ ಶುರುವಾಗಿದೆ. ಆದ್ದರಿಂದ ಸಂಬಂಧಪಟ್ಟ ಪೊಲೀಸ್ ಠಾಣೆಯವರು ಈ ಭಾಗದಲ್ಲಿ ಗಸ್ತು ತಿರುಗುವ ಮೂಲಕ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಬೇಕಿದೆ.
– ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.





